ಬಾಲ್ಯವಿವಾಹ ಕಂಡು ಬಂದಲ್ಲಿ ಮಾಹಿತಿ ನೀಡಿ

ವಿಜಯಪುರ: ಅಕ್ಷಯ ತೃತೀಯ ಪ್ರಯುಕ್ತ ಏ.20ರಂದು ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹ ಜರುಗಿಸಿದಲ್ಲಿ, ಅದು ಬಾಲ್ಯವಿವಾಹ ನಿಷೇಧ ಕಾಯ್ದೆ-2006ರನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

Published on

ಜಿಲ್ಲೆಯ ದೇವಸ್ಥಾನ, ಕಲ್ಯಾಣ ಮಂಟಪ ಸೇರಿ ಇತರೆ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಎಂಬ -Àಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಬಾಲ್ಯ ವಿವಾಹವನ್ನು ನಡೆಸುವ, ನಿರ್ದೇಶಿಸುವ ಅಥವಾ ಪ್ರಚೋದಿಸುವ ಯಾವುದೇ ವ್ಯಕ್ತಿ ಕಾನೂನು ಪ್ರಕಾರ ಸಮಾನವಾಗಿ ಹೊಣೆಗಾರರಾಗುತ್ತಾರೆ.
ಅಲ್ಲದೆ, ವಿವಾಹ ಸಮಾರಂಭವನ್ನು ನಡೆಸುವ ಪುರೋಹಿತರು, ಅದನ್ನು ಏರ್ಪಡಿಸುವ ಸಂಬAಽಕರು, ಸುಗಮಗೊಳಿಸುವ ಆಯೋಜಕರು ಸೇರಿ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಶಿಕ್ಷೆಗೆ ಒಳಗಾಗಲಿದ್ದಾರೆ ಎಂದು ಆದೇಶ ಹೊರಡಿಸಿದೆ.
ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿನ ಬಾಲ್ಯ ವಿವಾಹ ನಿಷೇಧ ಅಽಕಾರಿಗಳು ತೀವ್ರ ನಿಗಾವಹಿಸಿ ಪರಿಶೀಲನೆ ನಡೆಸುತ್ತಿದ್ದು, ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ದೊರೆತಲ್ಲಿ, ತಕ್ಷಣವೇ ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಅಥವಾ ಹತ್ತಿರದ ಪೊಲೀಸ್ ಠಾಣೆ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಽಕಾರಿಗಳಿಗೆ ತಿಳಿಸುವಂತೆ ಹಾಗೂ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net