ರೈತರಿಗೆ ಸಕಾರಾತ್ಮಕವಾಗಿ ಸ್ಪಂದನೆ

ದೇವರಹಿಪ್ಪರಗಿ ಪಟ್ಟಣದ ಹೊರವಲಯದಲ್ಲಿನ ಉಸ್ಮಾನ ಹಚ್ಯಾಳ ಅವರ ಹೊಲದಲ್ಲಿ ಕಬ್ಬಿನ ಬೆಳೆಯನ್ನು ಸಚಿವ ಡಾ. ಎಂ.ಬಿ. ಪಾಟೀಲ ವೀಕ್ಷಿಸಿದರು. ಜಿಲ್ಲಾಧಿಕಾರಿ ಆನಂದ ಕೆ., ಜಿಪಂ ಸಿಇಒ ರಿಷಿ ಆನಂದ, ಪ್ರಕಾಶ ವಡ್ಡರ, ಶಿವನಗೌಡ ಪಾಟೀಲ ಮತ್ತಿತರರಿದ್ದರು.
ದೇವರಹಿಪ್ಪರಗಿ ಪಟ್ಟಣದ ಹೊರವಲಯದಲ್ಲಿನ ಉಸ್ಮಾನ ಹಚ್ಯಾಳ ಅವರ ಹೊಲದಲ್ಲಿ ಕಬ್ಬಿನ ಬೆಳೆಯನ್ನು ಸಚಿವ ಡಾ. ಎಂ.ಬಿ. ಪಾಟೀಲ ವೀಕ್ಷಿಸಿದರು. ಜಿಲ್ಲಾಧಿಕಾರಿ ಆನಂದ ಕೆ., ಜಿಪಂ ಸಿಇಒ ರಿಷಿ ಆನಂದ, ಪ್ರಕಾಶ ವಡ್ಡರ, ಶಿವನಗೌಡ ಪಾಟೀಲ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಎಂ.ಬಿ. ಪಾಟೀಲ
  • ಸೂಕ್ತ ವರದಿ ನೀಡಿ
ದೇವರಹಿಪ್ಪರಗಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರೈತರೊಂದಿಗೆ ಇದ್ದು, ರೈತರಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸರ್ಕಾರಕ್ಕೆ ಸೂಕ್ತ ವರದಿ ನೀಡಿ, ಬೆಳೆ ಹಾನಿ ಕುರಿತು ಕ್ರಮ ಕೈಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಭಾನುವಾರ ಪಟ್ಟಣದ ಹೊರ ವಲಯದ ಸಿಂದಗಿ ರಸ್ತೆಯಲ್ಲಿರುವ ರೈತ ಉಸ್ಮಾನ ಹಚ್ಯಾಳ ಅವರ ಜಮೀನಿನಲ್ಲಿನ ಕಬ್ಬು ಬೆಳೆ ಖುದ್ದು ಪರಿಶೀಲಿಸಿ ಮಾತನಾಡಿದ ಅವರು, ವಾಡಿಕೆಗಿಂತ ಈ ಸಲ ಮಳೆ ತುಂಬ ಕಡಿಮೆಯಾಗಿದ್ದು, ರೈತರು ಪರದಾಡುವಂತಾಗಿದೆ. ಜಿಲ್ಲೆಯಾದ್ಯಂತ ವಿವಿಧ ಭಾಗಗಳಲ್ಲಿ ಅಧಿಕಾರಿಗಳೊಂದಿಗೆ ಖುದ್ದಾಗಿ ನಾನೇ ಸಂಚರಿಸಿ ಪರಿಶೀಲಿಸುತ್ತಿದ್ದೇನೆ. ತಕ್ಷಣವೇ ಪೂರ್ಣ ಪ್ರಮಾಣದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ ತಕ್ಷಣ ರೈತಪರ ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡು ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ. ರೈತರ ಪ್ರತಿಯೊಂದು ಸಂಕಷ್ಟಕ್ಕೂ ಸರ್ಕಾರವು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ, ಅವರ ಹಿತರಕ್ಷಣೆಗೆ ಸದಾ ಬದ್ಧವಾಗಿರುತ್ತದೆ ಎಂದರು.
ವಿವಿಧ ಗ್ರಾಮಗಳಲ್ಲಿ ರೈತರ ಜಮೀನಿಗೆ ತೆರಳಿ ಕಬ್ಬು, ಹತ್ತಿ ಸೇರಿ ವಿವಿಧ ಬೆಳೆಗಳ ಪ್ರಸ್ತುತ ಸ್ಥಿತಿಯನ್ನು ಅವಲೋಕಿಸಿದರು. ಮಳೆ ಅಭಾವದಿಂದಾಗಿ ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಬಿತ್ತನೆ ಮಾಡಿದ ಪೈರು ಒಣಗುತ್ತಿರುವುದನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದ ಸಚಿವರು, ಸ್ಥಳದಲ್ಲಿದ್ದ ರೈತರು ಹಾಗೂ ಕೃಷಿ ಅಧಿಕಾರಿ ಗಳಿಂದ ಬೆಳೆ ಹಾನಿ ಸಮಗ್ರ ಮಾಹಿತಿಯನ್ನು ಪಡೆದರು.
ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ, ಜಿಪಂ. ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಮ ಬರಗಿಮಠ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ, ಬ್ಲಾಕ್ ಅಧ್ಯಕ್ಷ ಬಶೀರ ಹಮ್ಮದ ಬೇಪಾರಿ, ಪಿಕೆಪಿಎಸ್ ಅಧ್ಯಕ್ಷ ಜಗದೀಶಗೌಡ ಪಾಟೀಲ, ಬಾಳನಗೌಡ ಪಾಟೀಲ, ಸಂಗಮೇಶ ಛಾಯಾಗೋಳ, ಕೊಂಡಗೂಳಿ ಮುನೀರ ಬಿಜಾಪುರ, ಮುರ್ತುಜ ತಾಂಬೋಳಿ, ಸುನೀಲ ಕನಮಡಿ, ಸಿದ್ದುಗೌಡ ಪಾಟೀಲ, ಮಲ್ಲನಗೌಡ ಬಿರಾದಾರ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net