ವಿಜಯಪುರ : ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರೀಕ್ಷೆವು ಮೇ 18ರಿಂದ 25ರವರೆಗೆ ಜಿಲ್ಲೆ ವಿಜಯಪುರ, ಮುದ್ದೇಬಿಹಾಳ, ಬಸವನಬಾಗೇವಾಡಿ, ಸಿಂದಗಿ, ಇಂಡಿ ಹಾಗೂ ಚಡಚಣ ತಾಲೂಕುಗಳಲ್ಲಿ ನಡೆಯಲಿದ್ದು,
ಪರೀಕ್ಷೆಗಳನ್ನು ಸುಸೂತ್ರ ಮತ್ತು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗ್ರತೆ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರನ್ವಯ ಪ್ರದತ್ತವಾದ ಅಽಕಾರದನ್ವಯ ನಿಷೇಧಾe್ಞÉ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಽಕಾರಿ ಮತ್ತು ಸಿಬ್ಬಂದಿ ಸೇರಿ ಇತರರು ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ -ÉÇÃನ್ ತರುವುದು ಮತ್ತು ಬಳಸುವುದು ನಿಷೇಽಸಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಽÃಕ್ಷಕರು ಮಾತ್ರ 'ಬೇಸಿಕ್ ಮೊಬೈಲ್' ಸೆಟ್ ಬಳಸಬಹುದಾಗಿದೆ.
ಇನ್ನು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ಪ್ರದೇಶವನ್ನು `ನಿಷೇಽತ ಪ್ರದೇಶ' ಎಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆ-É ಹಾಗೂ ಕೋಚಿಂಗ್ ಸೆಂಟರ್‌ಗಳನ್ನು ಬೆಳಗ್ಗೆ 8.30 ರಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ತೆರೆಯದಂತೆ ಜಿಲ್ಲಾಽಕಾರಿಗಳು ಆದೇಶಿಸಿದ್ದಾರೆ.