ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಮನಗೂಳಿ ಪಟ್ಟಣದ ಕನಕ ನಗರದ ಕೆಬಿಎಚ್‌ಪಿಎಸ್ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಎಸ್.ಎನ್. ಬಿರಾದಾರ ಮತ್ತಿತರರಿದ್ದಾರೆ.
ಮನಗೂಳಿ ಪಟ್ಟಣದ ಕನಕ ನಗರದ ಕೆಬಿಎಚ್‌ಪಿಎಸ್ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಎಸ್.ಎನ್. ಬಿರಾದಾರ ಮತ್ತಿತರರಿದ್ದಾರೆ.
Published on
ವಿಜಯಪುರ : ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕನಕ ನಗರದ ಕೆಬಿಎಚ್‌ಪಿಎಸ್ ಶಾಲೆಯಲ್ಲಿ ಸೋಮವಾರ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸಂಭ್ರಮದಿAದ ನಡೆಯಿತು.
ಬೇಸಿಗೆ ರಜೆ ಕಳೆದು ಮೊದಲ ಬಾರಿಗೆ ಶಾಲೆಗೆ ಆಗಮಿಸಿದ ಮಕ್ಕಳಿಗೆ ಆತ್ಮೀಯ ಸ್ವಾಗತಿಸಲಾಯಿತು. ನಂತರ ಕನಕ ನಗರದ ಪ್ರಮುಖ ಬೀದಿಗಳಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ, ಶಿಕ್ಷಣವೇ ಶಕ್ತಿ, ಶಿಕ್ಷಣದಿಂದಲೇ ಉಜ್ವಲ ಭವಿಷ್ಯ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಸೇರಿ ಮುಂತಾದ ಘೋಷಣೆಗಳನ್ನು ಕೂಗುತ್ತಾ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿದರು.
ನಂತರ ಶಾಲಾ ಆವರಣದಲ್ಲಿ ವಿದ್ಯಾಽದೇವತೆ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಪ್ರಸಕ್ತ ಶೈಕ್ಷಣಿಕ ವರ್ಷದ ಘೋಷವಾಕ್ಯ ಉತ್ತಮ ಕಲಿಕೆ ಉಜ್ವಲ ಭವಿಷ್ಯ ವಾಕ್ಯವನ್ನು ಎಲ್ಲರೂ ಹೇಳಿದರು.
ಮುಖ್ಯ ಶಿಕ್ಷಕ ಎಸ್.ಎನ್. ಬಿರಾದಾರ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿಭಾಷಾ ಬೋಧನೆಗೆ ಅನುಗುಣವಾಗಿ ಯಶಸ್ವಿಯಿಂದ ಬೋಽಸೋಣ ಎಂದು ಕರೆ ನೀಡಿದರು.
ಕೊನೆಯಲ್ಲಿ ಮಕ್ಕಳಿಗೆ ಪಠ್ಯಪುಸ್ತಕ, ನಂತರ ಮಧ್ಯಾಹ್ನ ಸಿಹಿಯಾದ ಬಿಸಿಯೂಟ ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net