ಎಸ್‌ಸಿಪಿ-ಟಿಎಸ್‌ಪಿ ಪ್ರಗತಿ ಪರಿಶಿಲನಾ ಸಭೆ, ಸಕಾಲಕ್ಕೆ ಯೋಜನೆ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಎಡಿಸಿ ಸೋಮಲಿಂಗ ಗೆಣ್ಣೂರ ಸೂಚನೆ

ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ ಎಸ್‌ಸಿಪಿ-ಟಿಎಸ್‌ಪಿ ಪ್ರಗತಿ ಪರಿಶಿಲನಾ ಸಭೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಅಶೋಕ ಘೋಣಸಗಿ, ಸಂಪತ್‌ಕುಮಾರ ಗುಣಾರಿ ಮತ್ತಿತರರಿದ್ದಾರೆ.
ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ ಎಸ್‌ಸಿಪಿ-ಟಿಎಸ್‌ಪಿ ಪ್ರಗತಿ ಪರಿಶಿಲನಾ ಸಭೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಅಶೋಕ ಘೋಣಸಗಿ, ಸಂಪತ್‌ಕುಮಾರ ಗುಣಾರಿ ಮತ್ತಿತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ವಿಶೇಷ ಘಟಕ ಯೋಜನೆ-ಗಿರಿಜನ ಉಪಯೋಜನೆಯ ಸಭೆ
  • ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ ಅಧ್ಯಕ್ಷತೆ
  • ಅನುದಾನ ಲ್ಯಾಪ್ಸ್ ಆಗದಂತೆ ಪ್ರಗತಿ ಸಾಧಿಸಲು ಸೂಚನೆ
ವಿಜಯಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಸಕಾಲಕ್ಕೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಜಾ, ಪಪಂ ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ನಿಗದಿಪಡಿಸಿದ ಅನುದಾನ ಲ್ಯಾಪ್ಸ್ ಆಗದಂತೆ ಪ್ರಗತಿ ಸಾಧಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶೀಘ್ರಗತಿಯಲ್ಲಿ ತಲುಪುವಂತಾಗಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಮರಳಿ ಹೋಗದಂತೆ ನೋಡಿಕೊಳ್ಳಬೇಕೆಂದರು.
ತೋಟಗಾರಿಕೆ ಇಲಾಖೆಯಡಿ ವಿವಿಧ ಯೋಜನೆ ಅನುಷ್ಠಾನಗೊಳಿಸಿ, ರೈತರು ಯೋಜನೆಯ ಮಾಹಿತಿ ಹೊಂದಿ, ಯೋಜನೆಯ ಸದುಪಯೋಗಪಡೆದುಕೊಂಡು ಆರ್ಥಿಕ ಸಬಲತೆ ಹೊಂದಲು ನೈಜ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಲಾಭ ತಲುಪಿಸಿ ಎಂದು ಹೇಳಿದ ಅವರು, ಯೋಜನೆಯ ಸದುಪಯೋಗಪಡಿಸಿಕೊಂಡ ಯಶಸ್ವಿ ಫಲಾನುಭವಿಗಳನ್ನು ಗುರುತಿಸಿ ಎಂದು ಹೇಳಿದರು.
ವಿವಿಧ ಇಲಾಖೆಯಡಿಯ ಅನುಷ್ಠಾನಗೊಳಿಸುವ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸುವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿಗಳು, ಮೀನುಗಾರರ ಸುರಕ್ಷತಾ ಸಲಕರಣೆಗಳನ್ನು ಒದಗಿಸಿ, ಅವರ ಬದುಕಿಗೆ ಸಹಾಯ ಒದಗಿಸಿಬೇಕು. ಬಲೆ ಮತ್ತು ಲೈವ್ ಜಾಕೆಟ್ ಒಳಗೊಂಡ ಗುಣಮಟ್ಟದ ಕಿಟ್ ಒದಗಿಸಲು ಕ್ರಮವಹಿಸುವಂತೆ ಸೂಚಿಸಿದರು.
ಪ್ರತಿ ಗ್ರಾಮದ ಎಸ್‌ಸಿ-ಎಸ್‌ಟಿ ಕಾಲನಿಗಳ ಮನೆಗಳಿಗೆ ಮೀಟರ್ ಅಳವಡಿಸಿದ ಅಂಕಿ ಅಂಶಗಳ ಮಾಹಿತಿಯನ್ನು ಒದಗಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಈಗಾಗಲೇ ಕೊರೆದ ಕೊಳವೆ ಬಾವಿ ನಿಗದಿತ ಅವಧಿಯಲ್ಲಿ ವಿದ್ಯುತ್ ಸಂಪರ್ಕ ಒದಗಿಸಬೇಕು. ಮುಂಬರುವ ಸಭೆಯಲ್ಲಿ ವಿದ್ಯುತ್ ಸಂಪರ್ಕ ಒದಗಿಸಿರುವ ವರದಿ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಪ್ರವಾಸೋದ್ಯಮ ಇಲಾಖೆಯಿಂದ ಅನುಷ್ಠಾನಗೊಳಿಸುವ ಪ್ರವಾಸ ದರ್ಶನ ಕಾರ್ಯಕ್ರಮವು ನಿಗದಿತ ಕಾಲಾವಧಿಯಲ್ಲಿ ಕಾರ್ಯಾಗತಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಅವರು  ಸಭೆಗೆ ಮಾಹಿತಿ ನೀಡಿದರು. ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನಾ, ಅರಣ್ಯ, ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ, ಹೆಸ್ಕಾಂ ಹಾಗೂ ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಘೋಣಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್‌ಕುಮಾರ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವಾಣ್,ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಸಿದ್ಧರಾಜು, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net