ವಿಜಯಪುರದ ಎಫಪಿಎಐ ಕಚೇರಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕುರಿತು ಆಯೋಜಿಸಲಾದ ವಿಶೇಷ ಜಾಗೃತಿ ಸಂವಾದ ಕಾರ್ಯಕ್ರಮ ನಡೆಯಿತು. ಸುಜಾತ ಕಲ್ಬುರ್ಗಿ, ಪೂಜಾ ದೇಶಪಾಂಡೆ, ಸಿ.ಕೆ. ಸುರೇಶ್ ಮತ್ತಿತರರಿದ್ದಾರೆ.
Published on:
Copied
Follow Us
ವಿಜಯಪುರ : ಮಹಿಳೆಯರ ಮೇಲಾಗುವ ಲೈಂಗಿಕ ಶೋಷಣೆ ತಪ್ಪಿಸಲು ಹೆಣ್ಣು ಮಕ್ಕಳಿಗೆ ಲೈಂಗಿಕ ಶಿಕ್ಷಣದ ಅಗತ್ಯವಿದೆ ಎಂದು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದ ಸಲಹೆಗಾರ್ತಿ ಸುಜಾತ ಕಲ್ಬುರ್ಗಿ ಹೇಳಿದರು.
ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ ಮತ್ತು -ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಸಹಯೋಗದಲ್ಲಿ ಇಲ್ಲಿನ ವಜ್ರಹನುಮಾನ ನಗರದ ಎಫಪಿಎಐ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕುರಿತು ಆಯೋಜಿಸಲಾದ ವಿಶೇಷ ಜಾಗೃತಿ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಲೈಂಗಿಕ ಶಿಕ್ಷಣವು ಹೆಣ್ಣನ್ನು ಪ್ರಬುದ್ಧಳನ್ನಾಗಿಸುತ್ತದೆ. ಇದರಿಂದ ಶೋಷಣೆಗೊಳಗಾವುದನ್ನು ತಪ್ಪಿಸುತ್ತದೆ. ಮಕ್ಕಳು ಮೊಬೈಲ್ ಬಳಕೆ ಮತ್ತು ಚಟುವಟಿಕೆಗಳ ಮೇಲೆ ಪೋಷಕರು ಸೂಕ್ಷ÷್ಮವಾಗಿ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.
ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ದೌರ್ಜನ್ಯ, ಶೋಷಣೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಒಳಗಾದರೆ ಮಹಿಳೆಯರು ಸರ್ಕಾರದ ಸಾಂತ್ವನ ಮಹಿಳಾ ಸಹಾಯವಾಣಿಗೆ ಸಂಪರ್ಕಿಸಿದರೆ ಪರಿಹಾರ ಒದಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್- ಇಂಡಿಯಾ ಜಿಲ್ಲಾ ಶಾಖೆಯ ಮುಖ್ಯಸ್ಥೆ ಪೂಜಾ ದೇಶಪಾಂಡೆ ಮಾತನಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಹೆಣ್ಣನ್ನು ತೀವ್ರವಾಗಿ ಶೋಷಿಸಲಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಸಂವಹನ ಇಲಾಖೆಯ ಸಿ.ಕೆ. ಸುರೇಶ ಹಾಗೂ ಎಎಫಪಿಎಐ ವೈದ್ಯಾಧಿಕಾರಿ ಡಾ. ಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿದರು.