ವಿದ್ಯಾರ್ಥಿಗಳು ಕಡಿಮೆ ಅಂಕಗಳನ್ನು ಪಡೆಯಲು ಕಾರಣಗಳೇನು ಎಂಬುವುದನ್ನು ವಿಶ್ಲೇಷಣೆಗೊಳಿಸಬೇಕು. ಸಮಸ್ಯೆಗಳನ್ನು ಪರಿಹರಿಸಿ ವಿದ್ಯಾರ್ಥಿಗಳ ಗೊಂದಲಗಳನ್ನು ಹೋಗಲಾಡಿಸಿ, ಉತ್ತಮ ಅಂಕ ಪಡೆಯಲು ಪ್ರೇರಣೆ ನೀಡಬೇಕು. ಏಕೆಂದರೆ ವಿದ್ಯಾರ್ಥಿ ಜೀವನದಲ್ಲಿ ಎಸ್‌ಎಸ್‌ಎಲ್‌ಸಿಯು ಬಹಳ ಪ್ರಮುಖ ಘಟ್ಟವಾಗಿದ್ದು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದಲ್ಲಿ ಮಾತ್ರ ಅವರು ಉನ್ನತ ಶಿಕ್ಷಣ ಪಡೆಯಲು ಸಹಾಯಕವಾಗುತ್ತದೆ ಮತ್ತು ಉತ್ತಮ ಭವಿಷ್ಯಕ್ಕೆ ನಾಂದಿಯಾಗುತ್ತದೆ ಎಂದರು.