ಹಿರಿಯ ಹೋರಾಟಗಾರ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ವಿಜಯಪುರ ಜಿಲ್ಲೆಯ ಜನತೆ, ಜಿಲ್ಲೆ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜು ಕೇಳುತ್ತಿರುವುದು ಯಾವುದೇ ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ; ಬಡ ಜನರಿಗೆ ಗುಣಮಟ್ಟದ ಆರೋಗ್ಯ ಶಿಕ್ಷಣ ಮತ್ತು ಚಿಕಿತ್ಸೆ ದೊರೆಯಬೇಕು ಎಂಬ ಏಕೈಕ ಉದ್ದೇಶಕ್ಕಾಗಿ. ಆದರೆ ಈ ನ್ಯಾಯಯುತ ಬೇಡಿಕೆ ಈಡೇರಿಸಲಾಗದೆ ಇದೀಗ ಹೋರಾಟವನ್ನೂ ಹತ್ತಿಕ್ಕುವ ಪ್ರಯತ್ನ ನಡೆಸಿದ್ದು ಖಂಡನೀಯ ಎಂದರು.