ಅರಸು ಅಭಿವೃದ್ಧಿ ಚಿಂತನೆ ಆಧಾರ

ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಹಮ್ಮಿಕೊಂಡಿದ್ದ ದೇವರಾಜ ಅರಸುರವರ ಜನ್ಮದಿನಾಚರಣೆಯಲ್ಲಿ ಪ್ರೊ. ವಿಜಯಾ ಕೋರಿಶೆಟ್ಟಿ ಮಾತನಾಡಿದರು. ಮಹೇಶ ಪೋತದಾರ ಮತ್ತಿತರರಿದ್ದಾರೆ.
ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಹಮ್ಮಿಕೊಂಡಿದ್ದ ದೇವರಾಜ ಅರಸುರವರ ಜನ್ಮದಿನಾಚರಣೆಯಲ್ಲಿ ಪ್ರೊ. ವಿಜಯಾ ಕೋರಿಶೆಟ್ಟಿ ಮಾತನಾಡಿದರು. ಮಹೇಶ ಪೋತದಾರ ಮತ್ತಿತರರಿದ್ದಾರೆ.
Published on

ವಿಜಯಪುರ:

ದೇವರಾಜ ಅರಸುರವರು ಜಾರಿಗೆ ತಂದ ಭೂ ಸುಧಾರಣೆ, ಜೀತ ಪದ್ಧತಿ ನಿರ್ಮೂಲನೆ ಸೇರಿ ಹಲವು ಕ್ರಾಂತಿಕಾರಿ ಕ್ರಮಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಮಹಿಳಾ ವಿವಿ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದುಳಿದ ವರ್ಗಗಳ ಕೋಶದ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ದಿ. ಡಿ. ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜದ ಒಳಿತಿನ ದೃಷ್ಟಿಯಿಂದ ಅರಸುರವರು ತಮ್ಮ ಅಽಕಾರಾವಽಯಲ್ಲಿ ಹಲವು ಮಹತ್ವದ ಬದಲಾವಣೆ ತಂದರು. ಭೂ ಸುಧಾರಣೆ, ಮಾನವ ಹಕ್ಕುಗಳ ರಕ್ಷಣೆ, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಹಾಗೂ ಜೀತ ಪದ್ಧತಿ ನಿರ್ಮೂಲನೆಯಂತಹ ಕ್ರಮಗಳು ಸಾಮಾಜಿಕ ಪರಿವರ್ತನೆಗೆ ಕಾರಣವಾದವು ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಅರಸುರವರ ಅಭಿವೃದ್ಧಿ ಚಿಂತನೆ ಆಧಾರವಾಗಿಟ್ಟುಕೊಂಡು ರಾಜ್ಯದ ಬೆಳವಣಿಗೆಗೆ ಹೊಸ ದಿಕ್ಕು ದೊರೆಯಿತು ಎಂದರು.
ಕನ್ನಡ ವಿಭಾಗದ ಪ್ರಾಧ್ಯಾಪಕ ನಾಗರಾಜ ಮಾತನಾಡಿದರು.
ವೀಣಾ ಪೊತದಾರ ಪ್ರಾರ್ಥಿಸಿದರು. ಮಮತಾಜ್ ಸ್ವಾಗತಿಸಿದರು. ಸವಿತಾ ಪವಾರ ಪರಿಚಯಸಿದರು. ರೇಣುಕಾ ಬಿಸಲಾನಾಯಕ ನಿರೂಪಿಸಿದರು. ಸೌಂದರ್ಯ ಲೋಣಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net