ವಿಜಯಪುರದ ಕಸಾಪ ಸಭಾಂಗಣದಲ್ಲಿ ಹಿಟ್ಟಿನಹಳ್ಳಿಯಲ್ಲಿ ನಡೆಯಲಿರುವ ಎಂಟನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಹಾಸಿಂಪೀರ ವಾಲಿಕಾರ ಮಾತನಾಡಿದರು. ಶಿಲ್ಪಾ ಭಸ್ಮೆ, ಅಭಿಷೇಕ ಚಕ್ರವರ್ತಿ, ಆನಂದ ಕುಲಕರ್ಣಿ ಮತ್ತಿತರರಿದ್ದಾರೆ.
Published on:
Copied
Follow Us
ವಿಜಯಪುರ: ನಗರ ಹೊರ ವಲಯದ ಹಿಟ್ಟಿನಹಳ್ಳಿಯಲ್ಲಿ ಜ.20, 21 ರಂದು ನಡೆಯಲಿರುವ ವಿಜಯಪುರ ತಾಲೂಕು ಎಂಟನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರನ್ನಾಗಿ ಸಾಹಿತಿ ಸೋಮಲಿಂಗ ಗೆಣ್ಣೂರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ನಗರದ ಕಸಾಪ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲೆ ಹಾಗೂ ತಾಲೂಕು ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.
ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಸರ್ವಾಧ್ಯಕ್ಷರ ಆಯ್ಕೆ ಪಾರದರ್ಶಕತೆಯಿಂದ ನಡೆದಿದೆ. ಕಸಾಪ ವತಿಯಿಂದ ಪ್ರತಿಭಾವಂತ ಹಾಗೂ ಸಾಹಿತ್ಯ ಕೃಷಿಗೈದವರನ್ನು ಗುರುತಿಸಿ, ಗೌರವಿಸುವ ಪ್ರಾತಿನಿಽಕ ಸಂಸ್ಥೆಯಾಗಿದೆ. ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ತಿಳಿಸಿದರು.