ನುಲಿಯ ಚಂದಯ್ಯ ಸಮಾಜದ ಮಾದರಿ

ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ಅಂಗವಾಗಿ ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಿಂದ ಹಮ್ಮಿಕೊಂಡಿದ್ದ ಮಹನೀಯ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಽಕಾರಿ ಡಾ. ಔದ್ರಾಮ ಚಾಲನೆ ನೀಡಿದರು.
ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ಅಂಗವಾಗಿ ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಿಂದ ಹಮ್ಮಿಕೊಂಡಿದ್ದ ಮಹನೀಯ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಽಕಾರಿ ಡಾ. ಔದ್ರಾಮ ಚಾಲನೆ ನೀಡಿದರು.
Published on

ವಿಜಯಪುರ:

ಶರಣ ನುಲಿಯ ಚಂದಯ್ಯ ಅವರು ಕಾಯಕ, ದಾಸೋಹ ಹಾಗೂ ಸಮಾನತೆಯ ತತ್ವಗಳ ಸಾರುವ ಮೂಲಕ ಅದರಂತೆ ನಡೆದು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಉಪ ವಿಭಾಗಾಽಕಾರಿ ಗುರುನಾಥ ದಡ್ಡೆ ಹೇಳಿದರು.

ನಗರದ ಕಂದಗಲ್ಲ ಹನುಮಂತರಾಯ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನುಲಿಯ ಚಂದಯ್ಯನವರು 12ನೇ ಶತಮಾನದಲ್ಲಿ ಕಾಯಕದ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕಾಯಕಕ್ಕೆ ಘನತೆ ತಂದುಕೊಟ್ಟ ಶರಣರ ಜೀವನ ಮತ್ತು ವಿಚಾರಧಾರೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ. ಯುವಜನರು ಶರಣರ ಜೀವನ, ವಚನಗಳು ಹಾಗೂ ಅವರ ಆದರ್ಶಗಳನ್ನು ಅರಿತುಕೊಳ್ಳಬೇಕೆಂದು ಅವರು ತಿಳಿಸಿದರು.
ಸಾಹಿತಿ ಮೋಹನ ಕಟ್ಟಿಮನಿ ಅವರು ನುಲಿಯ ಚಂದಯ್ಯ ಅವರ ಜೀವನ, ನಡೆದುಬಂದ ದಾರಿ, ಕಾಯಕನಿಷ್ಠೆ, ಶರಣ ತತ್ವಗಳ ಮೇಲಿನ ಬದ್ಧತೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳ ಕುರಿತು ಉಪನ್ಯಾಸ ನೀಡಿದರು.
ನಗರಾಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿ.ಪಂ. ಯೋಜನಾ ನಿರ್ದೇಶಕ ಅಶೋಕ ಕಲ್ಲಗಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಮತ್ತಿತರರಿದ್ದರು.
ಜಯಂತಿ ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಿಂದ ಹಮ್ಮಿಕೊಂಡಿದ್ದ ನುಲಿಯ ಚಂದಯ್ಯನವರ ಭಾವಚಿತ್ರದ ಮೆರವಣಿಗೆಯು ನಗರ ಪ್ರಮುಖ ವೃತ್ತಗಳ ಮೂಲಕ ಸಾಗಿ ನಂತರ ಕಂದಗಲ್ಲ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಂಡಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net