ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಬಿ.ಎಂ. ಪಾಟೀಲ ಪಬ್ಲಿಕ್ (ಸಿಬಿಎಸ್‌ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಸೋಮವಾರ ಅದ್ದೂರಿಯಾಗಿ ನಡೆಯಿತು. ಮಕ್ಕಳು ಶಾಲಾ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ಅವರನ್ನು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ವೈಭವದಿಂದ ಸ್ವಾಗತಿಸದರಲ್ಲದೇ, ಪ್ರತಿ ಮಗುವಿಗೂ ಶುಭಾಶಯ ಪತ್ರ ನೀಡಿ ಕರತಾಡನದ ಮೂಲಕ ಬರಮಾಡಿಕೊಂಡರು.