ಕಳೆದ ಎರಡು ವರ್ಷಗಳಿಂದ ರಸ್ತೆ ಮೇಲಿನ ಗುಂಡಿ ತಪ್ಪಿಸಲು ಹೋಗಿ ವಾಹನ ಸವಾರರು ಅಪಘಾತಗಳಿಗೆ ತುತ್ತಾಗಿದ್ದಾರೆ. ಗುಂಡಿಗಳನ್ನು ಸರಿಪಡಿಸುವಂತೆ ಜನರು ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಈ ಮಾರ್ಗದ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸವಾರರು ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ತಪ್ಪಿದ್ದಲ್ಲ. ರಸ್ತೆ ಸಂಪೂರ್ಣ ಹದಗೆಟ್ಟಿದ್ದರಿಂದ ಬಸ್,ಬೈಕ್, ಆಟೋ, ಕಾರು, ಟ್ರ‍್ಯಾಕ್ಟರ್ ಸೇರಿ ಹಲವು ವಾಹನಗಳ ಸವಾರರಿಗೆ ನುಂಗಲಾರದ ತುತ್ತಾಗಿದೆ.