ಇಂದು ಅಂಬೇಡ್ಕರ್ ಜಯಂತಿ

ಜಿಲ್ಲಾಡಳಿತ, ಜಿ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಏ. 14ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ಲ ಹನುಮಂತರಾಯ ರಂಗಮAದಿರದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಡಳಿತ, ಜಿ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಏ. 14ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ಲ ಹನುಮಂತರಾಯ ರಂಗಮAದಿರದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ.
Published on
ವಿಜಯಪುರ: ಜಿಲ್ಲಾಡಳಿತ, ಜಿ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಏ. 14ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ಲ ಹನುಮಂತರಾಯ ರಂಗಮAದಿರದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಗ್ಗೆ 8 ಗಂಟೆಗೆ ಮಹನೀಯರ ಪ್ರತಿಮೆಗೆ ಪುಷ್ಪಾರ್ಚನೆ, ನಂತರ ಜಲನಗರದ ಬುದ್ಧವಿಹಾರದಿಂದ ವಿವಿಧ ಕಲಾತಂಡಗಳೊAದಿಗೆ ಮಹನೀಯರ ಭಾವಚಿತ್ರದ ಮೆರವಣಿಗೆ ಆರಂಭಗೊಳ್ಳಲಿದೆ. ಮೆರವಣಿಗೆ ಜಿಲ್ಲಾ ನ್ಯಾಯಾಲಯ, ಬಾಗಲಕೋಟೆ ಕ್ರಾಸ್, ಕಿತ್ತೂರು ರಾಣಿ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣ, ಕೆಸಿ ಮಾರ್ಕೆಟ್, ಮಹಾತ್ಮ ಗಾಂಽ ವೃತ್ತ, ಬಸವೇಶ್ವರ ವೃತ್ತ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಕಂದಗಲ್ ರಂಗಮAದಿರದ ತಲುಪಲಿದೆ.
ನಂತರ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ವಿ.ಪ. ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ, ನವದೆಹಲಿ ವಿಶೇಷ ಪ್ರತಿನಿಽ ಪ್ರಕಾಶ ಹುಕ್ಕೇರಿ, ಕೆಎಸ್‌ಡಿ ನಿಗಮದ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯ ಸಭಾ ಸದಸ್ಯೆ ಸುಧಾ ಮೂರ್ತಿ ಸೇರಿ ಜಿಲ್ಲೆಯ ಜನಪತ್ರಿನಿಽಗಳು ಭಾಗವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net