ಅಧ್ಯಕ್ಷತೆ ವಹಿಸಿದ್ದ ರಾಜಶೇಖರ ಕೌಲಗಿ ಮಾತನಾಡಿ, ವಿದ್ಯಾರ್ಥಿಗಳು ಓದಿನಲ್ಲಿ ಶ್ರಧ್ಧೆಯನ್ನು ರೂಢಿಸಿಕೊಳ್ಳುವುದರೊಂದಿಗೆ ಒಳ್ಳೆಯ ಕನಸುಗಳನ್ನು ಕಾಣಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಬದುಕಲು ಓಟ ಅತ್ಯಗತ್ಯವಾಗಿದೆ ಎಂದು ತಿಳಿಸಿ, ಪ್ರಾಮಾಣಿಕವಾಗಿ ಅಧ್ಯಯನ ನಡೆಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಬೇಕೆಂದು ಶುಭ ಹಾರೈಸಿದರು.