2026 ಫೆ. 16ರ ಸುತ್ತೋಲೆ ಪ್ರಕಾರ ‘ತಂತ್ರಾಂಶದಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಸಂಖ್ಯಾ ಮಾಹಿತಿ ಪರಿಶೀಲಿಸಲಾಗಿ ನಿಗದಿಪಡಿಸಿದ ಕಾಲಾವಕಾಶದೊಳಗೆ ಮಾನ್ಯತೆ ನವೀಕರಣ ಪಡೆಯಲು ಅರ್ಜಿಗಳನ್ನು ಸಲ್ಲಿಸಲಾಗದೇ ಇರುವುದನ್ನು ಗಮನಿಸಿ’ ಅವಧಿ ವಿಸ್ತರಿಸಿ ಅವಕಾಶ ನೀಡಲಾಗಿತ್ತು. ಅಲ್ಲದೇ, ಮಾನ್ಯತೆ ನವೀಕರಣ ಕಡ್ಡಾಯವಾಗಿದ್ದು, ನವೀಕರಣಗೊಳ್ಳದಿದ್ದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೋಂದಾಯಿಸಲು, ಆರ್‌ಟಿಇ ಶುಲ್ಕ ಮರುಪಾವತಿಗೆ ಪ್ರಸ್ತಾವನೆ ಪರಿಗಣಿಸಲು, ಅನುದಾನಿತ ಶಾಲಾ ಶಿಕ್ಷಕರ ವೇತನ ಪಾವತಿಗೆ ಅವಕಾಶ ಇಲ್ಲ. ಆದ್ದರಿಂದ ಬಿಇಒ ಹಾಗೂ ಡಿಡಿಪಿಐ ವೈಯಕ್ತಿಕ ಗಮನ ಹರಿಸಿ ತಮ್ಮ ವ್ಯಾಪ್ತಿಯಲ್ಲಿ ಈವರೆಗೆ ಮಾನ್ಯತೆ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸದಿರುವ ಶಾಲಾ ಆಡಳಿತ ಮಂಡಳಿಗಳಿಗೆ ಅವಧಿ ವಿಸ್ತರಿಸಿರುವ ಬಗ್ಗೆ ಪ್ರಚಾರ ಕೈಗೊಂಡು ಪ್ರಸ್ತಾವನೆ ಸಲ್ಲಿಸಲು ಅಗತ್ಯ ಕ್ರಮ ವಹಿಸಲು ತಿಳಿಸಲಾಗಿದೆ.