ಪರೀಕ್ಷೆಗೆ ಸಂಬಂಧಿಸಿದ ನೀಲಿನಕ್ಷೆ, ಮಾದರಿ ಪ್ರಶ್ನೆ ಪತ್ರಿಕೆ, ಪರೀಕ್ಷೆ ಉಪಕ್ರಮಗಳನ್ನು ಈಗಾಗಲೇ ಒದಗಿಸಲಾಗಿದೆ. ಅದರಂತೆ-ಫಲಿತಾಂಶ ಸುಧಾರಣೆಗಾಗಿ ನೀಡುವ ನಿರ್ದೇಶನಗಳನ್ನು ಅಳವಡಿಸಿಕೊಂಡು, ವಿವಿಧ ರೀತಿಯ ಪರೀಕ್ಷೆಗಳನ್ನು ಏರ್ಪಡಿಸಿ, ಈ ಪರೀಕ್ಷೆಗಳನ್ನು ಮುಖ್ಯ ಪರೀಕ್ಷೆ ಎಂದೇ ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟು ಅಚ್ಚುಕಟ್ಟಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ನಮ್ಮ ಹೊಣೆಗಾರಿಕೆ ಹೆಚ್ಚಿಗಿದ್ದು, ಅದನ್ನರಿತು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.