

ವಿಜಯಪುರ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆ-ಸಂಸ್ಥೆಗಳ ಜಂಟಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ವಿಶೇಷ ಕಾರ್ಯಕ್ರಮಗಳ ಕುರಿತಾದ ಕರಪತ್ರವನ್ನು ಜಿಲ್ಲಾಧಿಕಾರಿ ಡಾ. ಆನಂದ ಕೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.
ಈ ಬಾರಿಯ ವಿಶ್ವ ಪ್ರವಾಸೋದ್ಯಮ ದಿನವನ್ನು ‘ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸಷ್ಟಿ’ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಹಲವು ಸ್ಪರ್ಧೆಗಳು ಮತ್ತು ಜಾಗತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿ.ಪಂ. ಸಿಇಒ ರಿಷಿ ಆನಂದ, ಎಸ್‌ಪಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಜುಫಿಶಾನ್ ಹಕ್, ಮುಖಂಡರಾದ ಪೀಟರ್ ಅಲೆಕ್ಸಾಂಡರ್, ಅಮೀನ ಹುಲ್ಲೂರ, ರಮೇಶ ಚವಾಣ, ಪ್ರವಾಸೋದ್ಯಮ ಸಮಾಲೋಚಕ ಅನಿಲಕುಮಾರ ಬಣಜಿಗೇರ ಉಪಸ್ಥಿತರಿದ್ದರು.
ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಸಾಂಸ್ಕೃತಿಕ ಹಿನ್ನೆಲೆಯನ್ನು ಬಿಂಬಿಸುವ ಎರಡು ನಿಮಿಷಗಳ ಕಿರುಚಿತ್ರ ಸ್ಪರ್ಧೆಯನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿದೆ. ಈಗಾಗಲೇ ಸೆ. 20ರಿಂದ ಸ್ಪರ್ಧೆ ಆರಂಭಗೊಂಡಿದ್ದು, ಸೆ.25ರ ಸಂಜೆ 4 ರವೆರೆಗೆ ನಡೆಯುವ ಸ್ಪರ್ಧೆಯಲ್ಲಿ ಸಾರ್ವಜನಿಕರು ತಮ್ಮ ವಿಡಿಯೊಗಳನ್ನು ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದ್ದು, ಅತ್ಯುತ್ತಮ ವಿಡಿಯೊಗಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು.
ಜತೆಗೆ ಬಿಎಲ್‌ಡಿಇ ಅಸೋಸಿಯೇಷನ್ .ಗು. ಹಳಕಟ್ಟಿ ಇಂಜಿನಿಯರಿಂಗ್ ಹಾಗೂ ತಂತ್ರಜ್ಞಾನ ಕಾಲೇಜಿನ ಸಹಯೋಗದೊಂದಿಗೆ ಆರ್ಕಿಟೆಕ್ಟ್ ವಿದ್ಯಾರ್ಥಿಗಳಿಗಾಗಿ ಸೆ. 21ರಿಂದ 25ರ ಮಧ್ಯಾಹ್ನ 3 ಗಂಟೆಯವರೆಗೆ ಕೃತಕ ಬುದ್ಧಿಮತ್ತೆ ಮೂಲಕ ಪ್ರವಾಸಿ ತಾಣಗಳ ಮರು ಪರಿಕಲ್ಪನೆ ವಿಷಯದ ಮೇಲೆ ವಿಶೇಷ ಪೋಸ್ಟರ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ಐತಿಹಾಸಿಕ ನಗರಿಯ ಸ್ವಚ್ಛತೆ ಮತ್ತು ಪರಂಪರೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸೆ. 25ರಂದು ಬೆಳಗ್ಗೆ 8 ಗಂಟೆಗೆ ಆನಂದ ಮಹಲ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅದರಂತೆ ಸೆ. 26 ರಂದು ಬೆಳಗ್ಗೆ 8 ಗಂಟೆಗೆ ಕೆಎಸ್‌ಟಿಡಿಸಿ ಹೋಟೆಲ್ ಆವರಣದಿಂದ ಆರಂಭವಾಗಿ ಗಗನ್ ಮಹಲ್, ಆನಂದ ಮಹಲ್, ಸಾತ್ ಮಂಜಿಲ್ ಮತ್ತು ಜೋಡಗುಮ್ಮಟ ಮೂಲಕ ತಾಜ್ ಬಾವಡಿಯವರೆಗೆ ಹೆರಿಟೇಜ್ ವಾಕ್ (ಪರಂಪರೆ ನಡಿಗೆ) ನಡೆಯಲಿದೆ.
ಸೆ.27ರಂದು ಬೆಳಗ್ಗೆ 10.30ಕ್ಕೆ ಇಲ್ಲಿನ ಇಬ್ರಾಹಿಂ ರೋಜಾದಲ್ಲಿ ಆವರಣದಲ್ಲಿ ಪ್ರವಾಸೋದ್ಯಮದಲ್ಲಿ ತಂತ್ರಜ್ಞಾನದ ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಿಎಲ್‌ಡಿಇ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜ್ ವಿಭಾಗದ ಸಹಯೋಗದೊಂದಿಗೆ ವಿಜಯಪುರ ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡುವ ಎಐ ಆಧಾರಿತ ಆಪ್ ಬಿಡುಗಡೆ ನಡೆಯಲಿದೆ. ಅಂದೇ ನೂತನ ೆಟೋಗ್ರಫಿ ಅಸೋಸಿಯೇಷನ್ ವತಿಯಿಂದ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನವೂ ನಡೆಯಲಿದೆ.
ಸೆ. 25ರಂದು ಬೆಳಗ್ಗೆ 10.30ರಿಂದ ಸಂಜೆ 4 ಗಂಟೆಯವರೆಗೆ ಇಬ್ರಾಹಿಂ ರೋಜಾ ಆವರಣದಲ್ಲಿ ಜಿಲ್ಲೆಯ ಕಲಾವಿದರಿಗಾಗಿ ವಿಶೇಷ ಚಿತ್ರಕಲಾ ಶಿಬಿರ ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮತ್ತು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಅರವಿಂದ ಹೂಗಾರ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.