ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಸಲಹೆ | ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

ಪ್ರವಾಸಿ ತಾಣದಿಂದ ಆರ್ಥಿಕತೆಗೆ ಬಲ
ವಿಜಯಪುರ: ಸ್ಥಳೀಯ ಐತಿಹಾಸಿಕ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವುದರಿಂದ ಜಿಲ್ಲೆಯ ಆರ್ಥಿಕತೆಗೆ ಬಲ ಸಿಗುವುದಲ್ಲದೇ, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಹೇಳಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026 ಅಂಗವಾಗಿ ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸೃಷ್ಟಿ ಎಂಬ ಧ್ಯೇಯಯವಾಕ್ಯದೊಂದಿಗೆ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಪುರಾತತ್ವ, ವಸ್ತುಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ, ಕೂಡಗಿ ಎನ್‌ಟಿಪಿಸಿ ಕೂಡಗಿ, ಹೋಟೆಲ್ ಅಸೋಸಿಯೇಷನ್ ಹಾಗೂ ಬಿಎಲ್‌ಡಿಇ ಶಿಕ್ಷಣ ಸಂಸ್ಥೆಯ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ಐತಿಹಾಸಿಕ ಆನಂದ ಮಹಲ್ ಸ್ಮಾರಕದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರದಲ್ಲಿರುವ ಸ್ಮಾರಕಗಳಿಂದಾಗಿ ವಿಜಯಪುರ ವಿಶ್ವ ಪ್ರಸಿದ್ಧಿ ಪಡೆದಿದೆ. ಪ್ರವಾಸಿಗರನ್ನು ಆಕರ್ಷಿಸಿ, ಈ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶಗಳು ತೆರೆದುಕೊಳ್ಳಲಿವೆ ಎಂದರು.

ಜಿಲ್ಲಾಽಕಾರಿ ಡಾ. ಆನಂದ ಕೆ. ಮಾತನಾಡಿ, ಜಿಲ್ಲೆಯ ಐತಿಹಾಸಿಕ ಸ್ಮಾರಕಗಳನ್ನು ಅಭಿವೃದ್ಧಿಪಡಿಸುವುದರ ಜತೆಗೆ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಮಾರಕಗಳ ಸಂರಕ್ಷಣೆ, ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ವಿವಿಧ ಯೋಜನೆಗಳ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಎನ್‌ಟಿಪಿಸಿ ಕೂಡಗಿ ಸಂಸ್ಥೆಯ ಸಂತೋಷ ತಿವಾರಿ ಮಾತನಾಡಿ, ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಕಲಾ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಅಗತ್ಯವಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಆನಂದ ಮಹಲ್ ಸ್ಮಾರಕದ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಆಂದೋಲನದಡಿಯ ಸ್ಮಾರಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಅರವಿಂದ ಹೂಗಾರ ಚಾಲನೆ ನೀಡಿದರು. ಜತೆಗೆ ಎನ್‌ಟಿಪಿಸಿ ಕೂಡಗಿ ಮತ್ತು ಕ್ಯಾನವಾಸ್ ಆರ್ಟ್ ಫೌಂಡೇಷನ್ ಸಹಯೋಗದಲ್ಲಿ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ ಆವರಣದಲ್ಲಿ ಹಿರಿಯ ಹಾಗೂ ಉದಯೋನ್ಮುಖ ಕಲಾವಿದರಿಗಾಗಿ ಆಕರ್ಷಕ ಚಿತ್ರಕಲಾ ಶಿಬಿರ ನಡೆಯಿತು. ಜಿಲ್ಲಾಽಕಾರಿ ಡಾ. ಆನಂದ ಕೆ. ಅವರು ಸ್ವತಃ ಕಲಾಕೃತಿ ಬಿಡಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಎನ್‌ಟಿಪಿಸಿ ಕಾರ್ಪೊರೇಟ್ ಸಂಪರ್ಕಾಽಕಾರಿ ಪೂಜಾ ಪಾಂಡೆ, ಡಿಜಿಎಂ ಜಯದೀಪ ತುಶಾರ, ಎಎಸ್‌ಐ ಸಹಾಯಕ ಸಂರಕ್ಷಣಾಽಕಾರಿ ವಿಜಯಕುಮಾರ, ಎಚ್.ಆರ್. ಮುಖ್ಯಸ್ಥ ಎಸ್.ವಿ.ಡಿ. ರವಿಕುಮಾರ, ಹೋಟೆಲ್ ಅಸೋಸಿಯೇಷನ್ ಕಾರ್ಯದರ್ಶಿ ವಿಜಯಕುಮಾರ ಡೋಣಿ, ಡಿ.ಪಿ. ಜಾಧವ್, ಪೀಟರ್ ಅಲೆಕ್ಸಾಂಡರ್, ಅಮೀನ ಹುಲ್ಲೂರ, ವೈ. ತಮ್ಮಣ್ಣ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಸಂರಕ್ಷಣಾಽಕಾರಿ ಲಾರೆನ್ಸ್ ಮತ್ತಿತರರಿದ್ದರು.

ಪ್ರವಾಸೋÃದ್ಯಮ ಇಲಾಖೆಯ ಉಪನಿರ್ದೇಶಕರಾದ ಅರವಿಂದ ಹೂಗಾರ ಸ್ವಾಗತಿಸಿದರು. ಕಲಾವಿದ ರಮೇಶ ಚವ್ಹಾಣ ನಿರೂಪಿಸಿದರು.
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ ಆವರಣದಲ್ಲಿ ಹಮ್ಮಿಕೊಂಡಿದ್ದ ಚಿತ್ರಕಲಾ ಶಿಬಿರಕ್ಕೆ ಜಿಲ್ಲಾಽಕಾರಿ ಡಾ. ಆನಂದ ಕೆ. ಅವರು ಸ್ವತಃ ಕಲಾಕೃತಿ ಬಿಡಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ರಮೇಶ ಚವಾಣ, ಜಯದೀಪ ತುಶಾರ ಮತ್ತಿತರರಿದ್ದಾರೆ.
Published on: 

ವಿಜಯಪುರ: ಸ್ಥಳೀಯ ಐತಿಹಾಸಿಕ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವುದರಿಂದ ಜಿಲ್ಲೆಯ ಆರ್ಥಿಕತೆಗೆ ಬಲ ಸಿಗುವುದಲ್ಲದೇ, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಹೇಳಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026 ಅಂಗವಾಗಿ ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸೃಷ್ಟಿ ಎಂಬ ಧ್ಯೇಯಯವಾಕ್ಯದೊಂದಿಗೆ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಪುರಾತತ್ವ, ವಸ್ತುಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ, ಕೂಡಗಿ ಎನ್‌ಟಿಪಿಸಿ ಕೂಡಗಿ, ಹೋಟೆಲ್ ಅಸೋಸಿಯೇಷನ್ ಹಾಗೂ ಬಿಎಲ್‌ಡಿಇ ಶಿಕ್ಷಣ ಸಂಸ್ಥೆಯ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ಐತಿಹಾಸಿಕ ಆನಂದ ಮಹಲ್ ಸ್ಮಾರಕದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರದಲ್ಲಿರುವ ಸ್ಮಾರಕಗಳಿಂದಾಗಿ ವಿಜಯಪುರ ವಿಶ್ವ ಪ್ರಸಿದ್ಧಿ ಪಡೆದಿದೆ. ಪ್ರವಾಸಿಗರನ್ನು ಆಕರ್ಷಿಸಿ, ಈ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶಗಳು ತೆರೆದುಕೊಳ್ಳಲಿವೆ ಎಂದರು.

ಜಿಲ್ಲಾಽಕಾರಿ ಡಾ. ಆನಂದ ಕೆ. ಮಾತನಾಡಿ, ಜಿಲ್ಲೆಯ ಐತಿಹಾಸಿಕ ಸ್ಮಾರಕಗಳನ್ನು ಅಭಿವೃದ್ಧಿಪಡಿಸುವುದರ ಜತೆಗೆ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಮಾರಕಗಳ ಸಂರಕ್ಷಣೆ, ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ವಿವಿಧ ಯೋಜನೆಗಳ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಎನ್‌ಟಿಪಿಸಿ ಕೂಡಗಿ ಸಂಸ್ಥೆಯ ಸಂತೋಷ ತಿವಾರಿ ಮಾತನಾಡಿ, ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಕಲಾ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಅಗತ್ಯವಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಆನಂದ ಮಹಲ್ ಸ್ಮಾರಕದ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಆಂದೋಲನದಡಿಯ ಸ್ಮಾರಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಅರವಿಂದ ಹೂಗಾರ ಚಾಲನೆ ನೀಡಿದರು. ಜತೆಗೆ ಎನ್‌ಟಿಪಿಸಿ ಕೂಡಗಿ ಮತ್ತು ಕ್ಯಾನವಾಸ್ ಆರ್ಟ್ ಫೌಂಡೇಷನ್ ಸಹಯೋಗದಲ್ಲಿ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ ಆವರಣದಲ್ಲಿ ಹಿರಿಯ ಹಾಗೂ ಉದಯೋನ್ಮುಖ ಕಲಾವಿದರಿಗಾಗಿ ಆಕರ್ಷಕ ಚಿತ್ರಕಲಾ ಶಿಬಿರ ನಡೆಯಿತು. ಜಿಲ್ಲಾಽಕಾರಿ ಡಾ. ಆನಂದ ಕೆ. ಅವರು ಸ್ವತಃ ಕಲಾಕೃತಿ ಬಿಡಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಎನ್‌ಟಿಪಿಸಿ ಕಾರ್ಪೊರೇಟ್ ಸಂಪರ್ಕಾಽಕಾರಿ ಪೂಜಾ ಪಾಂಡೆ, ಡಿಜಿಎಂ ಜಯದೀಪ ತುಶಾರ, ಎಎಸ್‌ಐ ಸಹಾಯಕ ಸಂರಕ್ಷಣಾಽಕಾರಿ ವಿಜಯಕುಮಾರ, ಎಚ್.ಆರ್. ಮುಖ್ಯಸ್ಥ ಎಸ್.ವಿ.ಡಿ. ರವಿಕುಮಾರ, ಹೋಟೆಲ್ ಅಸೋಸಿಯೇಷನ್ ಕಾರ್ಯದರ್ಶಿ ವಿಜಯಕುಮಾರ ಡೋಣಿ, ಡಿ.ಪಿ. ಜಾಧವ್, ಪೀಟರ್ ಅಲೆಕ್ಸಾಂಡರ್, ಅಮೀನ ಹುಲ್ಲೂರ, ವೈ. ತಮ್ಮಣ್ಣ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಸಂರಕ್ಷಣಾಽಕಾರಿ ಲಾರೆನ್ಸ್ ಮತ್ತಿತರರಿದ್ದರು.

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅರವಿಂದ ಹೂಗಾರ ಸ್ವಾಗತಿಸಿದರು. ಕಲಾವಿದ ರಮೇಶ ಚವ್ಹಾಣ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net