

Vijayaratna Award : ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ಪ್ರತಿವರ್ಷ ನೀಡುವ ಪ್ರತಿಷ್ಠಿತ ‘ವಿಜಯರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಶುಕ್ರವಾರ (ಜೂ.20) ಬೆಂಗಳೂರಿನಲ್ಲಿ ನಡೆಯಲಿದೆ.
ರಾಜ್ಯಾದ್ಯಂತ ಎಲ್ಲ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಇದ್ದುಕೊಂಡು ಸಮಾಜಸೇವೆಯಲ್ಲಿ ತೊಡಗಿರುವ ಗಣ್ಯರು, ಸಾಧಕರನ್ನು ಗುರುತಿಸುವ ಕಾಯಕವನ್ನು ವಿಜಯವಾಣಿ ಮಾಡುತ್ತಿದೆ. ಅದೇ ರೀತಿ ಈ ಬಾರಿ ವಿವಿಧ ಕ್ಷೇತ್ರಗಳ 27 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, ಬಿಎಂಟಿಎಫ್ ಎಡಿಜಿಪಿ ಡಿ.ರೂಪಾ ಮತ್ತು ವಿಆರ್ಎಲ್ ಸಮೂಹ ಸಂಸ್ಥೆಗಳ ಎಂಡಿ ಡಾ.ಆನಂದ ಸಂಕೇಶ್ವರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಪ್ರಶಸ್ತಿಯನ್ನು ನೀಡುವ ಮೂಲಕ ಒಳ್ಳೆಯ ಕೆಲಸಕ್ಕೆ ಪ್ರೋತ್ಸಾಹ ನೀಡುವ ಜತೆಗೆ ಮತ್ತೊಂದಿಷ್ಟು ಜನರಿಗೆ ಉತ್ಸಾಹ ಬರುವಂತೆ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ನಿರಂತರವಾಗಿ ಈ ಕೆಲಸವನ್ನು ವಿಜಯವಾಣಿ ಮಾಡುತ್ತಿದೆ. ಕಾರ್ಯಕ್ರಮಕ್ಕೆ ಎಂಎಸ್ಐಎಲ್ ಸಹಯೋಗ ಇದೆ.
ಸನ್ಮಾನ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಈ ಕೆಳಗಿನ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ...