ದೇಶಭಕ್ತರ ಸೆಳೆದ ಕಾರ್ಗಿಲ್ ವಿಜಯ ದಿವಸ, ವಿಜಯವಾಣಿ ಆಯೋಜಿಸಿದ್ದ ಕಾರ್ಯಕ್ರಮ

IMG_20240728_171325_330.jpg
Published on

ಹುಬ್ಬಳ್ಳಿ: ನಗರದ ರಂಭಾಪುರಿ ಸಮುದಾಯ ಭವನದಲ್ಲಿ ಕನ್ನಡದ ನಂಬರ್ ಒನ್ ಪತ್ರಿಕೆ ವಿಜಯವಾಣಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸದ ಸಂಭ್ರಮಾಚರಣೆಯು ಅಸಂಖ್ಯ ದೇಶಭಕ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು.

ಸ್ವತಃ ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿ ದೇಶ ಸೇವೆ ಮಾಡಿದ ಅನೇಕ ಯೋಧರು, ಸೈನಿಕರು ಕುಟುಂಬದವರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ದೇಶಕ್ಕೆ ಸೇವೆ ಸಲ್ಲಿಸಿದ ವೀರಯೋಧರಿಗೆ ಗೌರವ ಸಲ್ಲಿಸಲಾಯಿತು. ಅನೇಕ ಯೋಧರು ಹಾಗೂ ಕುಟುಂಬದವರು, ಮಕ್ಕಳು ತಮ್ಮ ಅನಿಸಿಕೆ ಹಂಚಿಕೊಂಡರು.

ಭಾರತ ಮಾತೆಗೆ ಪುಷ್ಪಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಆರ್ ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ವಿಆರ್ ಎಲ್ ಟ್ರಾವಲ್ಸ್ ಪ್ರೈವೇಟ್ ಲಿಮಿಟೆಡ್ ಎಂಡಿ ಶಿವಾ ಸಂಕೇಶ್ವರ, ಸ್ವರ್ಣ ಗ್ರುಪ್ ಆಫ್ ಕಂಪನಿಯ ಎಂಡಿ ಡಾ. ವಿ.ಎಸ್.ವಿ. ಪ್ರಸಾದ, ಶಾಸಕ ಮಹೇಶ ಟೆಂಗಿನಕಾಯಿ, ರೋಟರಿ ಕ್ಲಬ್ ನ ಲಿಂಗರಾಜ ಪಾಟೀಲ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net