ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ

udp-26-vidyartimitra 1
Published on

ಉಡುಪಿ: ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ ಎಂದು ಸಮಾನ ಮನಸ್ಕ ಕನ್ನಡಿಗರ ವೇದಿಕೆ ಅಧ್ಯಕ್ಷ ಕೆ. ಶ್ರೀನಿವಾಸ ರಾವ್​ ಹೇಳಿದರು.

ಗುರುವಾರ ಒಳಕಾಡು ಸಂಯುಕ್ತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿಮಿತ್ರ ವಿತರಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನತೆ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಪತ್ರಿಕೆಗಳನ್ನು ಓದುವುದರಿಂದ ಸಾಮಾನ್ಯಜ್ಞಾನ ವೃದ್ಧಿಯಾಗುತ್ತದೆ. ಇದರಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಮುಖ್ಯಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಹಶಿಕ್ಷಕಿ ಭಾರತೀ ನಾಯಕ್​, ಸಹಶಿಕ್ಷಕರಾದ ಶಿವರಾಮ ಶೆಟ್ಟಿ, ಗಣಪತಿ ಭಟ್​ ಮೊದಲಾದವರು ಉಪಸ್ಥಿತರಿದ್ದರು. ವಿಜಯವಾಣಿ ಹಿರಿಯ ವರದಿಗಾರ ಗೋಪಾಲಕೃಷ್ಣ ಪಾದೂರು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net