ವಿಜಯೇಂದ್ರ ಕಾಂಗ್ರೆಸ್ ಹೈಕಮಾಂಡಾ?, ಸಚಿವ ಜಮೀರ್‌ಅಹ್ಮದ್ ಪ್ರಶ್ನೆ

jameer
Published on

ವಿಜಯಪುರ: ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ. ಹೀಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್‌ಅಹ್ಮದ ಖಾನ್ ಹೇಳಿದರು.

ವಿಜಯ ದಶಮಿ ಬಳಿಕ ಸಿಎಂ ರಾಜೀನಾಮೆ ನೀಡುರೆಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಸಂಬಂಧಿಸಿದಂತೆ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹೂ ಇಸ್ ವಿಜಯೇಂದ್ರ ಎಂದು ಇಂಗ್ಲಿಷ್‌ನಲ್ಲಿ ಪ್ರಶ್ನಿಸಿದರಲ್ಲದೇ ವಿಜಯೇಂದ್ರ ಕಾಂಗ್ರೆಸ್ ಹೈಕಮಾಂಡಾ? ಅವರು ಹೇಳಿದ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾ? ಎಂದರು.

ಮುಂದುವರಿದು ನಮ್ಮ ಪಕ್ಷದ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿ ಅವರು ರಾಜೀನಾಮೆ ಕೊಡಬಾರದು ಎಂದು ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

ಸತೀಶ ಜಾರಕಿಹೊಳಿ ಕಾರ್ಯಕ್ರಮವೊಂದರಲ್ಲಿ ‘ಮುಂದಿನ ಸಿಎಂ ಸತೀಶ ಜಾರಕಿಹೊಳಿ’ ಎಂಬ ಕೂಗು ಕೇಳಿ ಬಂದ ಬಗ್ಗೆ ಪ್ರತಿಕ್ರಿಯಿಸುತ್ತಾ, ಅಭಿಮಾನಿಗಳು ಕೂಗುತ್ತಾರೆ. ಹಾಗಂತ ಸಿಎಂ ಆಗಿ ಬಿಡುತ್ತಾರಾ? ನನ್ನ ಅಭಿಮಾನಿಗಳು ಸಹ ಕೂಗುತ್ತಾರೆ. ನಾನು ಸಿಎಂ ಆಗುತ್ತೇನಾ? ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net