ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಲೆಲ್ಲಾ ದೇಶ ವಿರೋಧಿ ಚುಟವಟಿಕೆಗಳು ಹೆಚ್ಚಳ: ವಿಜಯೇಂದ್ರ

B Y Vijayendra
Published on

ದೊಡ್ಡಬಳ್ಳಾಪುರ: ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಲೆಲ್ಲಾ ಕರ್ನಾಟಕದಲ್ಲಿ ದೇಶ ವಿರೋಧಿ ಚಟುವಟಿಕೆಗಳು ಹೆಚ್ಚುತ್ತವೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಈ ಕುರಿತು ಮಾತನಾಡಿದ ವಿಜಯೇಂದ್ರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಮಾತ್ರಕ್ಕೆ ಲೋಕಸಭೆ ಚುನಾವಣೆಯನ್ನು ಗೆದ್ದಿದ್ದೇವೆ ಎಂಬಂತೆ ಕಾಂಗ್ರೆಸ್​ ನಾಯಕರು ವರ್ತಿಸುತ್ತಿದ್ದಾರೆ ಇದು ತುಂಬಾ ದಿನ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ಧಾರೆ.

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಮುಖಂಡರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲಾ ದೇಶ ವಿರೋಧಿ ಚಟುವಟಿಕೆಗಳು ಹೆಚ್ಚಳವಾಗುತ್ತಿದೆ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ್ರ ಮಾತ್ರಕ್ಕೆ ಕಾಂಗ್ರೆಸ್​ ನಾಯಕರು ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶವನ್ನೇ ಗೆದ್ದಿದ್ದೇವೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಕಾಂಗ್ರೆಸ್​ ನಾಯಕರ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಆ ನಂತರ ಕಾಂಗ್ರೆಸ್​ ನಾಯಕರು ಭ್ರಮೆಯಿಂದ ಹೊರಬರಲಿದ್ಧಾರೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net