ಡಾ.ವಿಜಯಲಕ್ಷ್ಮೀ ದೇಶಮಾನೆಗೆ ಪದ್ಮಶ್ರೀ ಪ್ರಶಸ್ತಿ: ಲಿಂಗರಾಜ ಅಪ್ಪ ಹರ್ಷ

Lingaraj Appa
Published on

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿ ನಗರದ ಖ್ಯಾತ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷಿö್ಮÃ ದೇಶಮಾನೆ ಅವರು ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವುದು ಇಡೀ ನಾಡಿಗೆ ಹೆಮ್ಮೆಯ ವಿಷಯ ಎಂದು ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಅಧ್ಯಕ್ಷ ಡಾ.ಲಿಂಗರಾಜ ಅಪ್ಪ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅತ್ಯಂತ ಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿ, ವಿಶ್ವಶ್ರೇಷ್ಠ ಕ್ಯಾನ್ಸರ್ ತಜ್ಞರಾಗಿ ಸಾವಿರಾರು ಜೀವಗಳನ್ನು ಉಳಿಸಿದ ಕೀರ್ತಿ ಹೊಂದಿದ್ದಾರೆ. ಬಿಡುವಿಲ್ಲದ ಕಾರ್ಯಬಾಹುಳ್ಯದ ಮಧ್ಯೆ ಸಾಮಾಜಿಕ ಬದುಕಿನಲ್ಲಿ ಸಕ್ರೀಯವಾಗಿರುವ ಡಾ.ದೇಶಮಾನೆ ಅವರ ಸೇವೆಗೆ ಸಂದ ಗೌರವ ಇದಾಗಿದೆ. ಸ್ವಾತಂತ್ರÈ ಹೋರಾಟಗಾರರ ಕುಟುಂಬದಿAದ ಬಂದ ಡಾ.ವಿಜಯಲಕ್ಷಿö್ಮÃ ಅವರ ಸೇವೆಯೂ ನಾಡಿಗೆ ಅಪಾರವಾಗಿದ್ದು, ದೇಶದ ಯುವ ಜನಾಂಗಕ್ಕೆ ಸ್ಫೂರ್ತಿಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net