

ಬಂಟ್ವಾಳ: ತುಂಬೆ ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ, ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಆಶ್ರಯದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿಸ್ತೃತ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಭಾನುವಾರ ತುಂಬೆಯಲ್ಲಿ ನಡೆಯಿತು.
ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು. ಸಮಿತಿ ಕಾರ್ಯಧ್ಯಕ್ಷ ಅನಿಲ್ ಪಂಡಿತ್ 10 ಲಕ್ಷ ರೂ. ನೀಡುವುದಾಗಿ ಘೋಷಿಸಿದರು. ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ ಹಾಗೂ ಅಜಿತ್ ಚೌಟ ದೇವಸ್ಯ ಸಹಕಾರ ನೀಡುವುದಾಗಿ ತಿಳಿಸಿದರು. ಬಜರಂಗದಳದ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು ಹಾಗೂ ಕೋಶಾಧಿಕಾರಿ ಸೋಮಪ್ಪ ಕೋಟ್ಯಾನ್ ಮಾತನಾಡಿದರು.
ಕಾರ್ಯಾಧ್ಯಕ್ಷರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಕಾಶ್ಚಂದ್ರ ರೈ ದೇವಸ್ಯ, ರಾಮಚಂದ್ರ ಸುವರ್ಣ, ಜಗದೀಶ್ ಪೂಜಾರಿ ಕುಮ್ಡೇಲು, ತುಂಬೆ ಗ್ರಾಪಂ ಉಪಾಧ್ಯಕ್ಷ ಗಣೇಶ್ ಸಾಲ್ಯಾನ್ ತುಂಬೆ, ಶ್ರೀ ಶಾರದಾ ಪ್ರತಿಷ್ಠಾನ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ರಾಘವ ಬಂಗೇರ ಪೇರ್ಲಬೈಲು, ಉಪಾಧ್ಯಕ್ಷ ಉಮೇಶ್ ಸಾಲ್ಯಾನ್ ಬೆಂಜನಪದವು, ಉಪಾಧ್ಯಕ್ಷೆ ಶೋಭಾ ಗೋಪಾಲ್ ಮೈಂದನ್, ಪ್ರಧಾನ ಕಾರ್ಯದರ್ಶಿ ಯೋಗೀಶ್ ಕೋಟ್ಯಾನ್ ಕುಮ್ಡೇಲು, ಕೋಶಾಧಿಕಾರಿ ವಿನೋದ್ ಬೊಳ್ಳಾರಿ, ಸಂಘಟನಾ ಕಾರ್ಯದರ್ಶಿ ವಿಜಯ್ ಕುಮಾರ್ ಕಜೆಕಂಡ, ಜಗದೀಶ್ ಕಡೆಗೋಳಿ ಉಪಸ್ಥಿತರಿದ್ದರು.
ಪ್ರತಿಷ್ಠಾನ ಕಾರ್ಯದರ್ಶಿ ಪ್ರವೀಣ್ ಬಿ.ತುಂಬೆ ಸ್ವಾಗತಿಸಿದರು. ಸಮಿತಿ ಪ್ರಧಾನ ಸಂಚಾಲಕ ತಾರಾನಾಥ ಕೊಟ್ಟಾರಿ ತೇವು ಪ್ರಾಸ್ತಾವಿಕ ಮಾತನಾಡಿದರು. ಸುಶಾಂತ್ ಬೊಳ್ಳಾರಿ ವಂದಿಸಿದರು. ಸಂತೋಷ್ ಕುಮಾರ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.
-----ಫೋಟೋ-----
ಬಿಟಿಡಬ್ಲ್ಯು_ಮೇ25_6