ವಿಜೃಂಭಣೆಯ ಶ್ರೀಸಾಯಿ ಉತ್ಸವ

17-kollegal-3,,,
Published on

ಕೊಳ್ಳೇಗಾಲ: ಶ್ರೀಶಿರಡಿ ಸತ್ಯಸಾಯಿ ಟ್ರಸ್ಟ್, ಎಚ್.ಕೆ. ಮೆಮೋರಿಯಲ್ ಟ್ರಸ್ಟ್, ರೋಟರಿ ಮಿಡ್ ಟೌನ್ ಸಂಸ್ಥೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಗುರುವಾರ ಪಟ್ಟಣದಲ್ಲಿ ಶ್ರೀಸಾಯಿ ಉತ್ಸವ ವಿಜೃಂಭಣೆಯಿಂದ ನೆರವೇರಿತು.


ಪಟ್ಟಣದ ಸಾಯಿಬಾಬಾ ದೇವಸ್ಥಾನದ ಮುಂಭಾಗ ಹೂವನಿಂದ ಅಲಂಕೃತಗೊಂಡಿದ್ದ ರಥದ ಮೇಲೆ ಪ್ರತಿಷ್ಠಾಪಿಸಲಾಗಿದ್ದ ಶ್ರೀಸಾಯಿ ಬಾಬಾ ಉತ್ಸವಮೂರ್ತಿಯನ್ನು ಇಟ್ಟು ಪೂಜೆ ಸಲ್ಲಿಸಿದ ಬಳಿಕ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.


ಉತ್ಸವದಲ್ಲಿ ಡೊಳ್ಳು ಕುಣಿತ, ಹುಲಿ ವೇಷಧಾರಿ ಕುಣಿತ, ತಮಟೆ, ಗೊರವನ ಕುಣಿತ, ಮಂಗಳವಾದ್ಯ, ವೀರಗಾಸೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡದೊಂದಿಗೆ ಪ್ರಮುಖ ರಸ್ತೆಗಳಲ್ಲಿ ನಡೆಸಿದರು.


ಉತ್ಸವದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ನಗರಸಭೆ ಅಧ್ಯಕ್ಷೆ ರೇಖಾ, ಉಪಾಧ್ಯಕ್ಷ ಎ.ಪಿ.ಶಂಕರ್, ಚಾಮುಲ್ ನಿರ್ದೇಶಕ ಕಮರವಾಡಿ ರೇವಣ್ಣ, ಉಪ್ಪಾರ ನಿಗಮ ಮಾಜಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್, ಕಂದಹಳ್ಳಿ ನಂಜುಂಡಸ್ವಾಮಿ, ರೋಟರಿ ಮಿಡ್ ಟೌನ್ ಅಧ್ಯಕ್ಷ ಲೋಕೇಶ್, ಪ್ರವೀಣ್, ಎ.ಡಿ.ಶಿವಪ್ರಕಾಶ್, ಎಚ್.ಕೆ. ಮೆಮೋರಿಯಲ್ ಟ್ರಸ್ಟ್ ಪ್ರೇಮಲತಾ ಕೃಷ್ಣಸ್ವಾಮಿ, ಬೆಂಗಳೂರಿನ ಸಿಆರ್‌ಇ ಸೆಲ್ ಎಸಿಪಿ ಎಚ್.ಕೆ.ಮಹಾನಂದ ಹಾಗೂ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net