ಗ್ರಾಮಮಟ್ಟದಿಂದ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯ : ಶಾಸಕ ರಾಜೇಶ್ ನೈಾಕ್ ಕರೆ

New Project (2)
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಕರ್ನಾಟಕ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಜೂನ್ 23ರಂದು ಅವಿಭಜಿತ ದ.ಕ ಜಿಲ್ಲೆಯಲ್ಲಿ ಪ್ರತಿ ಗ್ರಾಪಂ ಮುಂಭಾಗ ನಡೆಸಲಾಗುವ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲದೆ ಸವಲತ್ತು ವಂಚಿತ ಫಲಾನುಭವಿಗಳು ಭಾಗವಹಿಸುವ ಮೂಲಕ ಗ್ರಾಪಂ ಮಟ್ಟದಿಂದಲೇ ಜಡ್ಡು ಹಿಡಿದ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯ ಆಗಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನೈಾಕ್ ಉಳಿಪಾಡಿ ಹೇಳಿದರು.

ಬಿ.ಸಿ.ರೋಡಿನಲ್ಲಿ ಗುರುವಾರ ಬಿಜೆಪಿ ಬಂಟ್ವಾಳ ಮಂಡಲ ಕಾರ್ಯಕಾರಿಣಿ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ಸಂಧ್ಯಾ ಸುರಕ್ಷಾ, ಪಿಂಚಣಿ, ಮಾಶಸನ ಸೇರಿದಂತೆ ವಿವಿಧ ಯೋಜನೆಯಡಿ ಸೌಲಭ್ಯಗಳನ್ನು ಕಿತ್ತುಕೊಳ್ಳಲು ಮುಂದಾಗಿದ್ದು, ಬಂಟ್ವಾಳ ತಾಲೂಕಿನಲ್ಲಿ 7,543 ಮಂದಿ ಫಲಾನುಭವಿಗಳಿಗೆ ನೋಟಿಸ್ ಜಾರಿಗೊಳಿಸಿ ಬಡವರ ಹೊಟ್ಟೆಗೆ ಬರೆ ಹಾಕಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರ ಕೇವಲ ವಸೂಲಿಬಾಜಿಯಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಗ್ರಾಪಂ ಎದುರು ಏಕಕಾಲದಲ್ಲಿ ಪ್ರತಿಭಟನೆ ನಡೆಸಲಿದೆ ಎಂದರು.

ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ಬೆಳ್ತಂಗಡಿ, ಕಿಶೋರ್‌ಕುಮಾರ್ ಬೊಟ್ಯಾಡಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್, ಉಪಾಧ್ಯಕ್ಷೆ ಪೂಜಾ ಪೈ, ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ವಿಕಸಿತ ಭಾರತ ಸಂಕಲ್ಪ ಸಂಚಾಲಕ ಹರೀಶ್ ಕಂಜಿಪಿಲಿ, ವಿವಿಧ ಘಟಕದ ಪದಾಧಿಕಾರಿಗಳಾದ ರಾಕೇಶ್ ರೈ ಕಡೆಂಜ, ರೂಪಾ, ಮೋಹನ್ ಪಿ.ಎಸ್., ವಿಜಯ ರೈ, ವಸಂತ ಅಣ್ಣಳಿಕೆ, ಬಾಲಕೃಷ್ಣ ಸೇರ್ಕಳ, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.

ಬಿಜೆಪಿ ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ವಂದಿಸಿದರು. ನಾಗೇಶ್ ಮಧ್ವ ಕಾರ್ಯಕ್ರಮ ನಿರೂಪಿಸಿದರು.

ದ.ಕ. ಜಿಲ್ಲೆಯಲ್ಲಿ ಐವತ್ತು ಸಾವಿರದಷ್ಟು ಮಂದಿ ಫಲಾನಿಭವಿಗಳು ರಾಜ್ಯ ಸರ್ಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕಿ ಸರ್ಕಾರ ಲೂಟಿ ಮಾಡುತ್ತಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ನಯಾಪೈಸೆಯ ಅನುದಾನ ಸಿಗುತ್ತಿಲ್ಲ. ರಾಜೇಶ್ ನೈಾಕ್ ಶಾಸಕ https://www.vijayavani.net/vibha-shrinivas-2 https://www.vijayavani.net/traffic-problem

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net