ಪ್ರತಿ ಮನೆಗೂ ತಲುಪಲಿ ಸರ್ಕಾರದ ಸಾಧನೆ : ಸತೀಶ್ ಕುಂಪಲ ಆಶಯ

New Project (20)
Published on

ಸುಳ್ಯ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 11ವರ್ಷದಲ್ಲಿ ದೇಶವನ್ನು ಅಭಿವೃದ್ಧಿಪಥದಲ್ಲಿ ಮುನ್ನಡೆಸಿದ್ದು, ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

ಸುಳ್ಯ ತಾಲೂಕಿನ ಪೆರುವಾಜೆ ಜೆಡಿ ಆಡಿಟೋರಿಯಂನಲ್ಲಿ ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಮತ್ತು ವಿಕಸಿತ ಭಾರತ ಸಂಕಲ್ಪ ಸಭೆ ಉದ್ಘಾಟಿಸಿ ಮಾತನಾಡಿದರು.

ಮೋದಿ ಸರ್ಕಾರದ 11ನೇ ವರ್ಷಾಚರಣೆ ಅಂಗವಾಗಿ ಬಿಜೆಪಿ ಹಮ್ಮಿಕೊಂಡ ಸಂಕಲ್ಪದಿಂದ ಸಾಧನೆವರೆಗೆ ಕಾರ್ಯಕ್ರಮದ ಜಿಲ್ಲಾ ತಂಡದ ಸಂಚಾಲಕ ಹರೀಶ್ ಕಂಜಿಪಿಲಿ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆದರೆ, ನರೇಂದ್ರ ಮೋದಿ ಅವರು ದೇಶವನ್ನು ಅಭಿವೃದ್ಧಿಯ ಮುಂಚೂಣಿಗೆ ತಂದರು. ಸುಮಾರು ಒಂದು ಸಾವಿರಕ್ಕೂ ಅಧಿಕ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ದೇಶದ ಸಮಗ್ರ ಅಭಿವೃದ್ಧಿಗೆ ಗಮನ ನೀಡಿದ್ದಾರೆ ಎಂದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಡು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸಂಕಲ್ಪದಿಂದ ಸಾಧನೆವರೆಗೆ ಕಾರ್ಯಕ್ರಮದ ಸುಳ್ಯ ತಾಲೂಕು ಸಂಚಾಲಕಿ ಪುಲಸ್ಯಾ ರೈ, ಸದಸ್ಯರಾದ ಆಶಾ ತಿಮ್ಮಪ್ಪ, ಪದ್ಮನಾಭ ಶೆಟ್ಟಿ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು. ಸಂಕಲ್ಪದಿಂದ ಸಾಧನೆವರೆಗೆ ಕಾರ್ಯಕ್ರಮದ ಜಿಲ್ಲಾ ತಂಡದ ಸದಸ್ಯ ನಿತೀಶ್ ಶಾಂತಿವನ ವಿಕಸಿತ ಭಾರತ ಸಂಕಲ್ಪದ ಪ್ರತಿಜ್ಞೆ ಬೋಧಿಸಿದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಸುಳ್ಯಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ, ವಿವಿಧ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಅಕ್ರಮ ಸಕ್ರಮ, 94ಸಿ, 94ಸಿಸಿ ಮಂಜೂರು ಮಾಡುವುದು ಸೇರಿದಂತೆ ಜನರ ಯಾವುದೇ ಕೆಲಸಗಳು ಆಗುತ್ತಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ಅನುದಾನ ಬರುತ್ತಿಲ್ಲ. ಸತೀಶ್ ಕುಂಪಲ ಬಿಜೆಪಿ ಜಿಲ್ಲಾಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net