

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಜಿಲ್ಲೆಗೆ ಬೇಕಾದ ಮೂಲಸೌಕರ್ಯ ನೀಡದ, ಕಾನೂನು ಸುವ್ಯವಸ್ಥೆಗಳನ್ನು ಕಾಪಾಡದ ರಾಜ್ಯ ಸರ್ಕಾರ ಜಿಲ್ಲೆಗೆ ಅನ್ಯಾಯ ಮಾಡುತ್ತಿದೆ. ಜಿಲ್ಲೆಯ ಜನರ ಮೇಲೆ ದ್ವೇಷ ಸಾಧಿಸುತ್ತಾ ಜಿಹಾದಿ ಮಾನಸಿಕತೆಯ ಅಧಿಕಾರ ನಡೆಸುತ್ತಿದೆ. ಇದರಿಂದ ಇಲ್ಲಿ ವಿಚಿತ್ರ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಸ್ಥಿತಿ ಉಂಟಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಲಾಯಿಲದಲ್ಲಿ ಶನಿವಾರ ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕಾರ್ಯಕ್ರಮ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿದರು. ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆಳ್ವ, ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು, ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ಉಪಾಧ್ಯಕ್ಷರಾದ ಹರೀಶ್ ಕಂಜಿಪಿಲಿ, ರಾಕೇಶ್ ರೈ, ಹರಿಕೃಷ್ಣ ಬಂಟ್ವಾಳ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತರಿದ್ದರು.
ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು ವಂದೇ ಮಾತರಂ ಗೀತೆ ಹಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಪ್ರಶಾಂತ್ ಪಾರೆಂಕಿ ವಂದಿಸಿದರು. ಲಾಯಿಲ ಗ್ರಾಪಂ ಸದಸ್ಯ ಅರವಿಂದ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.
ಕೇಂದ್ರ ಸರ್ಕಾರವು ತಾಲೂಕಿನ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ 1,500 ಕೋಟಿ ರೂ.ಗಿಂತ ಹೆಚ್ಚಿನ ಅನುದಾನ ನೀಡಿದೆ. ರಾಜ್ಯ ಸರ್ಕಾರ ಕಳೆದ ಅವಧಿಯಲ್ಲಿ ಬಿಡುಗಡೆಗೊಂಡ ಅನುದಾನವನ್ನೂ ವಾಪಸ್ ಪಡೆದು ಅನ್ಯಾಯ ಮಾಡಿದೆ. ಗ್ರಾಮೀಣ ಭಾಗದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿದ್ದು, ಪ್ರತಿ ಯೋಜನೆಗಳು ಬೂತ್ ಮಟ್ಟವನ್ನು ತಲುಪಿವೆ. ಹರೀಶ್ ಪೂಂಜ ಶಾಸಕ https://www.vijayavani.net/uniform-distribution-at-kakyabidu-school https://www.vijayavani.net/diamond-plus-award-for-rotary