ಮಾಲ್ದಾರೆಯಲ್ಲಿ ವಿಕಸಿತ ಭಾರತ ಸಂಕಲ್ಪಯಾತ್ರೆ

ಚಿತ್ರ 15ಎಸ್ ಡಿ ಪಿ 01
ಮಾಲ್ದಾರೆ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪಯಾತ್ರೆ ನಡೆಯಿತು.
Published on

ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ಶುಕ್ರವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯಿತು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಪಿಎಂ ಮುದ್ರಾ ಯೋಜನೆ, ಪಿಎಂ ಉಜ್ವಲ ಯೋಜನೆ, ಪಿಎಂ ವಿಶ್ವಕರ್ಮ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಬಗ್ಗೆ ಡಿಜಿಟಲ್ ಪರದೆಯ ಮೂಲಕ ಜನತೆಗೆ ಮಾಹಿತಿ ನೀಡಲಾಯಿತು.

ಪಾಲಿಬೆಟ್ಟ ಬ್ಯಾಂಕ್ ವ್ಯವಸ್ಥಾಪಕ ಸಜೀವ್ ಮಾತನಾಡಿ, ದಿಲ್ಲಿಯಿಂದ ಹಳ್ಳಿಯವರೆಗೆ ಭಾರತ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವ ಗುರಿಯೇ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲ ಉದ್ದೇಶವಾಗಿದೆ. ಪ್ರತಿಯೊಬ್ಬರೂ ಇದರ ಸದುಪಯೋಗವನ್ನು ಪಡೆದುಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂದರು.

ಮಾಲ್ತಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಕುಂಞಣ್ಣ, ಸದಸ್ಯರಾದ ಚಂದ್ರ, ಇಸ್ಮಾಯಿಲ್, ಶೋಭಾ, ಬ್ಯಾಂಕ್ ಆಫ್ ಬರೋಡ ಸಿದ್ದಾಪುರ ವ್ಯವಸ್ಥಾಪಕಿ ಗೀತಾ, ಪಲ್ಲವಿ, ಧರ್ಮೇಶ್, ಮೀನಾಕ್ಷಿ, ಸಂಜೀವಿನಿ ಒಕ್ಕೂಟದ ಪುಷ್ಪಾ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net