ಇಂದು ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ

shobha
Published on

ಉಡುಪಿ: ಭಾರತದಾದ್ಯಂತ ಜನವರಿ 26 ರವರೆಗೆ ನಡೆಯುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಉಡುಪಿಯಲ್ಲಿ ನ. 30 ರಂದು ಅಂಬಲಪಾಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಬೆಳಗ್ಗೆ 10ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೇರಪ್ರಸಾರದ ಮೂಲಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.
75 ದಿನಗಳಲ್ಲಿ ದಿನಕ್ಕೆ 2 ಗ್ರಾಮ ಪಂಚಾಯಿತಿನಂತೆ ಜಿಲ್ಲೆಯ 155 ಗ್ರಾಮ ಪಂಚಾಯಿತಿಗಳನ್ನು ಯಾತ್ರೆ ತಲುಪಲಿದ್ದು, ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ ಆಯುಷ್ಮಾನ್​ ಭಾರತ್​, ಪಿಎಂ ಉಜ್ವಲ ಯೋಜನೆ, ಪಿಎಂ ಕಿಸಾನ್​ ಸಮ್ಮಾನ್​, ಜನಧನ್​ ಯೋಜನಾ, ಸುರಕ್ಷಾ ಬಿಮಾ ಯೋಜನೆಗಳು ಸೇರಿದಂತೆ 17 ಯೋಜನೆಗಳ ಬಗ್ಗೆ ಎಲ್​ ಇ ಡಿ ಪರದೆಯ ಮೂಲಕ ಮಾಹಿತಿ ನೀಡಲಾಗುತ್ತದೆ. ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಯಾತ್ರೆಯ ಉದ್ದೇಶವಾಗಿದೆ. ಬ್ಯಾಂಕ್​ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿ, ಸ್ಥಳದಲ್ಲೇ ಆಯ್ದ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net