ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

karnataka-lokayukta
Published on

ಬೆಂಗಳೂರು: ಖಾತಾ ಮಾಡಿಕೊಡಲು 70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಕೋನಪ್ಪನ ಅಗ್ರಹಾರ ಗ್ರಾಮ ಪಂಚಾಯಿತಿ ಗ್ರಾಮ ಲೆಕ್ಕಾಧಿಕಾರಿ ಜತ್ತಪ್ಪ ಬಂಧಿತ ಆರೋಪಿ. ಎಚ್.ಎಂ.ಪ್ರಕಾಶ್ ಎಂಬುವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ದೂರುದಾರ ಪ್ರಕಾಶ್, ಮೃತ ಸಹೋದರನ ಮಗಳ ಹೆಸರಲ್ಲಿ ಪೌತಿ ಖಾತಾ ಮಾಡಿಕೊಡಲು ಆರೋಪಿಯು ಎರಡು ಲಕ್ಷ ರೂ. ಬೇಡಿಕೆ ಇಟ್ಟು ಸ್ವೀಕರಿಸಿದ್ದರು. ನಂತರ ೧೦ ಸಾವಿರ ರೂ. ಸಹ ಪಡೆದುಕೊಳ್ಳಲಾಗಿತ್ತು. ಈಗ 70 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಪೊಲೀಸರಿಗೆ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಆರೋಪಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net