ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ: ಸರ್ಕಾರಿ ನೌಕರರ ಸಂಘ, ಕಂದಾಯ ಇಲಾಖೆ ಬೆಂಬಲ

Village administration officials protest Mandya
Published on

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನ ಪೂರೈಸಿತು. ಅಂತೆಯೇ ಹೋರಾಟಕ್ಕೆ ಬೆಂಬಲ ಸೂಚಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘ ಹಾಗೂ ಜಿಲ್ಲಾ ಕಂದಾಯ ಇಲಾಖೆ ನೌಕರರು ಭಾಗವಹಿಸಿದರು.

21 ತಂತ್ರಾಂಶಗಳನ್ನೊಳಗೊಂಡ ಆ್ಯಪ್ ನಿರ್ವಹಣೆಯ ಹೊರೆ, ಪತಿ ಪತ್ನಿ ಅಂತರ್ ಜಿಲ್ಲಾ ವರ್ಗಾವಣೆ ತೊಡಕು, ಸರ್ಕಾರಿ ರಜಾದಿನಗಳಲ್ಲಿ ಕೆಲಸ ಮಾಡುವ ಒತ್ತಡ, ಮಾನಸಿಕ ಕಿರಿಕಿರಿ ಹಾಗೂ 20 ವರ್ಷವಾದರೂ ಗ್ರಾಮ ಆಡಳಿತಾಧಿಕಾರಿಗಳಿಗೆ ಬಡ್ತಿಗೆ ಅವಕಾಶವಿಲ್ಲದಿರುವುದು ಸೇರಿದಂತೆ ಹಲವು ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದೇವೆ. ಈ ಸಮಸ್ಯೆ ಬಗೆಹರಿಸುವುದರ ಜತೆಗೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಯನ್ನು ಜಿಲ್ಲಾಮಟ್ಟದಲ್ಲಿ ಮಾತ್ರ ವರ್ಗಾವಣೆಗೆ ಅವಕಾಶವಿದೆ. ಇಡೀ ರಾಜ್ಯಕ್ಕೆ ಅನ್ವಯಿಸುವಂತೆ ಜೇಷ್ಠತಾ ಪಟ್ಟಿ ತಯಾರಿಸಿ ವರ್ಗಾವಣೆಗೆ ಅವಕಾಶ ನೀಡಬೇಕು. ಪ್ರಯಾಣ ಭತ್ಯೆ ದರವನ್ನು 500 ರೂರಿಂದ 3 ಸಾವಿರ ರೂ.ಗೆ ಹೆಚ್ಚಿಸಬೇಕು. ಕೆಲಸದ ಅವಧಿ ಮುನ್ನ ಮತ್ತು ಕೆಲಸದ ಅವಧಿ ಮುಕ್ತಾಯ ನಂತರ ನಡೆಸಲಾಗುವ ಎಲ್ಲ ಬಗೆಯ ಸಭೆಯನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಶಂಭುಗೌಡ, ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಡಿ.ತಮ್ಮಣ್ಣಗೌಡ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಿ.ಪಿ.ಹರೀಶ್, ಪ್ರಧಾನ ಕಾರ್ಯದರ್ಶಿ ಸಿ.ಗುಣಶೇಖರ್, ರಾಜ್ಯ ಪರಿಷತ್ ಸದಸ್ಯ ಎಚ್.ಎನ್.ರಾಜು, ತಾಲೂಕು ಅಧ್ಯಕ್ಷರಾದ ಕುಮಾರ್, ನಿಂಗೇಗೌಡ, ಶಿವಪ್ಪ, ರಮೇಶ್, ಈರಣ್ಣ, ಭಾಸ್ಕರ್, ಎಸ್.ಮಹೇಶ್, ವೆಂಕಟೇಶ್, ಎಚ್.ಮಂಜುನಾಥ್, ಲಿಂಗಸ್ವಾಮಿ, ರೇವಣ್ಣ, ಮಲ್ಲಿಕಾರ್ಜುನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net