ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ 2ನೇ ದಿನಕ್ಕೆ ಮುಂದುವರಿಕೆ

mng--11 Feb VA prathibhatane
ವಿವಿಧ ಬೇಡಿಕೆಗಳನನು ಹೀಡೆರಿಸುವಂತೆ ಸೋಮವಾರದಿಂದ ಆರಂಭಗೊಂಡ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನಕ್ಕೆ ಮುಂದುವರಿದಿದ್ದು, ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಿದರು.
Published on

ಮಂಗಳೂರು: ವಿವಿಧ ಬೇಡಿಕೆಗಳನನು ಹೀಡೆರಿಸುವಂತೆ ಸೋಮವಾರದಿಂದ ಆರಂಭಗೊಂಡ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನಕ್ಕೆ ಮುಂದುವರಿದಿದೆ.

ಸರ್ಕಾರಿ ಸೇವೆಯನ್ನೊಳಗೊಂಡ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಷನ್ ಸ್ಥಗಿತಗೊಳಿಸಿ ದ.ಕ ಹಾಗೂ ಉಡುಪಿ ಜಿಲ್ಲೆಯ ಎಲ್ಲತಾಲೂಕು ಕಚೇರಿ ಮುಂಭಾಗದಲ್ಲಿ ಆಯಾಯ ತಾಲೂಕು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ ಮಂಗಳವಾರವೂ ಮುಂದುವರಿದಿದೆ. ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು, ಅಂತರ್ ಜಿಲ್ಲಾ ವರ್ಗಾವಣೆ ಹಾಗೂ ಇತರ ಎಲ್ಲ ಇಲಾಖೆಯಲ್ಲಿ ಇರುವಂತೆ ಕಂದಾಯ ಇಲಾಖೆಯಲ್ಲೂ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರೂಪಿಸಬೇಕು, ಸೇವಾವಿಷಯಗಳಿಗೆ ಸಂಬಂಧಿಸಿ ಸೌಲಭ್ಯ ಕಲ್ಪಿಸಬೇಕು, ಸುಸಜ್ಜಿತ ಕಚೇರಿ ಸಹಿತ ಮೂಲಭೂತ ಸೌಲಭ್ಯ ಕಲ್ಪಿಸಬೇಕು, ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿ ಕುಟುಂಬಕ್ಕೆ ಪರಿಹಾರ ಸಹಿತ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಲಾಗುತ್ತಿದೆ.

ಕಳೆದ ವರ್ಷ ಸೆ.26ರಿಂದ ಅ.3ರ ವರೆಗೆ ರಾಜ್ಯಾದ್ಯಂತ ಮುಷ್ಕರ ನಡೆದಿತ್ತು. ಬೆಳಗ್ಗೆ 9ರಿಂದ ಸಂಜೆ 5ರ ವರೆಗೂ ಪ್ರತಿಭಟನೆ ನಡೆಸಿದ್ದಾರೆ. ಫೆ.12ರ ವರೆಗೂ ಈ ಪ್ರತಿಭಟನೆ ಮುಂದುವರಿಯಲಿದ್ದು, ಬಳಿಕ ರಾಜ್ಯ ಸಂಘದ ಸೂಚನೆಯಂತೆ ಮುಂದಿನ ನಡೆ ಇಡಲಿದ್ದೇವೆ ಎಂದು ಪ್ರತಿಭಟನಾ ನಿರತರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net