ಗ್ರಾಮ ಆಡಳಿತಾಧಿಕಾರಿ ಲಕ್ಷ್ಮೀದೇವಿ ಅಮಾನತು

Published on

ಮದ್ದೂರು: ಪಟ್ಟಣದ ತಾಲೂಕು ಕಚೇರಿಯಲ್ಲಿ ಭೂಮಿ ಗ್ರಾಮ ಆಡಳಿತಾಧಿಕಾರಿಯಾಗಿದ್ದ ಲಕ್ಷ್ಮೀದೇವಿ ಅವರನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕುಮಾರ ಅದೇಶಿಸಿದ್ದಾರೆ.

ತಾಲೂಕಿನ ಕಸಬಾ ಹೋಬಳಿಯ ಭೀಮನಕೆರೆ ಗ್ರಾಮದ ಸರ್ವೇ ನಂಬರ್ 121/3 ರ 2.4 ಎಕರೆ ಭೂಮಿಗೆ ಸಂಬಂಧಪಟ್ಟಂತೆ ಕಾಲಂ 11 ರಲ್ಲಿದ್ದ ಋಣಭಾರವನ್ನು ತೆಗೆದುಹಾಕಿ ಕರ್ತವ್ಯ ಲೋಪವೆಸಗಿದ್ದರು. ಈ ಬಗ್ಗೆ ಸಾರ್ವಜನಿಕರು 1 ತಿಂಗಳ ಹಿಂದೆ ಪಟ್ಟಣದ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ನಂತರ ಈ ಬಗ್ಗೆ ಉಪ ವಿಭಾಗಾಧಿಕಾರಿಗಳು ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಲಕ್ಷ್ಮೀದೇವಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದ್ದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net