ಹಳ್ಳಿ ಮಕ್ಕಳಿಗೆ ಬೇಕು ಪ್ರೋತ್ಸಾಹ

P PURA DASARA KREEDEE 3 (2)
Published on

ಪರಶುರಾಮಪುರ: ಹಳ್ಳಿಗಾಡಿನ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ಸಹಕಾರ ಮತ್ತು ಪ್ರೋತ್ಸಾಹ ದೊರೆತರೆ ಅಪ್ರತಿಮ ಸಾಧಕರಾಗಿ ಹೊರಹೊಮ್ಮುತ್ತಾರೆ ಎಂದು ನಿವೃತ್ತ ಶಿಕ್ಷಕ ಬೋರಯ್ಯ ಹೇಳಿದರು.

ಗ್ರಾಮದ ಕರ್ನಾಟಕ ಪಬ್ಲಿಕ್‌ಸ್ಕೂಲ್ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಮೊಬೈಲ್, ದೃಶ್ಯ ಮಾಧ್ಯಮಗಳ ಪ್ರಭಾವ ಹಾಗೂ ಆಧುನಿಕ ಕಾಲಘಟ್ಟದಲ್ಲೂ ಹಳ್ಳಿಗರು ಕ್ರೀಡೆಯಲ್ಲಿನ ಆಸಕ್ತಿ ಕಳೆದುಕೊಂಡಿಲ್ಲ ಖೋ-ಖೋ, ವಾಲಿಬಾಲ್, ಥ್ರೋ ಬಾಲ್ ಸೇರಿ ಗುಂಪು ಮತ್ತು ವೈಯಕ್ತಿಕ ಆಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಎಂದರು.

ವಾಲ್ಕೀಕಿ ನಾಯಕರ ಸಂಘದ ಅಧ್ಯಕ್ಷ ಟಿ.ನಾಗರಾಜು ಮಾತನಾಡಿ, ಆಂಧ್ರಗಡಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾ ಚಟುವಟಿಕೆ ಹಮ್ಮಿಕೊಳ್ಳಬೇಕು. ಈ ಮೂಲಕ ಮಕ್ಕಳ ಪ್ರತಿಭೆ ಹೊರತರಲು ಸಹಕಾರಿ ಆಗಲಿದೆ ಎಂದು ಹೇಳಿದರು.

ಗ್ರಾಮದ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಆರ್.ತಿಪ್ಪೇಸ್ವಾಮಿ ಮಾತನಾಡಿದರು. ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಗ್ರಾಪಂ ಅಧ್ಯಕ್ಷ ಜಗಳೂರಸ್ವಾಮಿ, ಉಪಾಧ್ಯಕ್ಷೆ ಸರೋಜಾ ಚಿತ್ತಯ್ಯ, ನಾಗರಾಜು, ಮಂಜುನಾಥ, ಚಿತ್ತಯ್ಯ, ಈರಣ್ಣ, ಲಕ್ಷ್ಮೀದೇವಿ, ಸುಜಾತಾ, ಮಹಾಲಕ್ಷ್ಮೀ ಇದ್ದರು.

ಜಿಲ್ಲಾಡಳಿತ, ಜಿಪಂ, ಯುವಜನ ಸಬಲೀಕರಣ ಇಲಾಖೆ, ಕ್ರೀಡಾ ಇಲಾಖೆ, ಗ್ರಾಮದ ಸ್ಪೋರ್ಟ್ಸ್ ಕ್ಲಬ್, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net