ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು

25BTP02
ಬೆಟ್ಟದಪುರ ಸಮೀಪದ ಹಲಗನಹಳ್ಳಿ ಗ್ರಾಮ ಪಂಚಾಯಿತಿಯ ಹೆಚ್ಚುವರಿ ಕಟ್ಟಡವನ್ನು ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಉದ್ಘಾಟಿಸಿದರು.
Published on

ಬೆಟ್ಟದಪುರ: ತಾಲೂಕಿನ ಅಭಿವೃದ್ಧಿ ವಿಚಾರದಲ್ಲಿ ಹಲವು ಯೋಜನೆಗಳನ್ನು ನೀಡುವುದರ ಜತೆಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದರು.

ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಗ್ರಾಮ ಪಂಚಾಯಿತಿಯ ಹೆಚ್ಚುವರಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಹಲಗನಹಳ್ಳಿ ಗ್ರಾಮದಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಬಸ್ ನಿಲ್ದಾಣ ನಿರ್ಮಾಣ ಸೇರಿದಂತೆ ಇತರ ಬೇಡಿಕೆಗಳನ್ನು ಗ್ರಾಮಸ್ಥರು ನನ್ನ ಗಮನಕ್ಕೆ ತಂದಿದ್ದಾರೆ. ಬೇಡಿಕೆಯಂತೆ ಕೆಲಸ ಮಾಡಲಾಗುವುದು ಭರವಸೆ ನೀಡಿದರು.

ಪಿಎಲ್.ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಲೋಕೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ವೆಂಕಟೇಶ್, ಉಪಾಧ್ಯಕ್ಷೆ ಮೀನಾಕ್ಷಿ ಜಗದೀಶ್, ಸದಸ್ಯರಾದ ಸುಹೇಲ್ ಪಾಷಾ, ಸಫೀರ್ ಅಹಮದ್, ರಫೀಕ್ ಅಹಮದ್, ನಜೀಬ್ ಖಾನ್, ಸನೂಬಿಯಾ, ನೂರ ಆಸ್ಮ, ವಸಂತಮ್ಮ, ಪದ್ಮ, ವೆಂಕಟೇಶ್, ಗೀತಾ, ಸಂತೋಷ್, ನಾಗಮ್ಮ, ಸುರೇಶ, ಪುಟ್ಟಸ್ವಾಮಿಗೌಡ, ಕುಮಾರ, ವಸಂತ, ತಹಸೀಲ್ದಾರ್ ನಿಸರ್ಗ ಪ್ರಿಯಾ.ಜೆ, ತಾಲೂಕು ಪಂಚಾಯಿತಿ ಇಒ ಸುನೀಲ್ ಕುಮಾರ್, ಪಿಡಿಒ ಪರಮೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net