ಕುಡಿಯುವ ನೀರಿಗಾಗಿ ಗ್ರಾಪಂ ಸದಸ್ಯರ ಪ್ರತಿಭಟನೆ

14-.kkr110-24
ಕಿಕ್ಕೇರಿ ಹೋಬಳಿಯ ಲಕ್ಷ್ಮೀಪುರ ಗ್ರಾಪಂ ಕಚೇರಿ ಎದುರು ಸೋಮವಾರ ಗ್ರಾಪಂ ಸದಸ್ಯರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮಾದಿಹಳ್ಳಿ ಶ್ರೀಧರ್, ಅಶೋಕ್, ರಘು, ಸ್ವಾಮಿ, ಕುಮಾರ್, ಲೋಕೆಶ್, ರಾಜೇಶ್, ಬಬ್ರುವಾಹನ, ಉಮೇಶ್ ಮತ್ತಿತರರಿದ್ದರು.
Published on

ಕಿಕ್ಕೇರಿ: ಮಾದಿಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಖಂಡಿಸಿ ಲಕ್ಷ್ಮೀಪುರ ಗ್ರಾಪಂ ಸದಸ್ಯರು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.


ಹೋಬಳಿಯ ಲಕ್ಷ್ಮೀಪುರ ಗ್ರಾಪಂ ಕಚೇರಿ ಮುಂದೆ ಸೋಮವಾರ ಗ್ರಾಪಂ ಸದಸ್ಯರು, ವಿವಿಧ ಗ್ರಾಮಗಳ ಗ್ರಾಮಸ್ಥರು ಜಮಾಯಿಸಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಪಂ ವ್ಯಾಪ್ತಿಯ ಮಾದಿಹಳ್ಳಿ, ಉದ್ದಿನಮಲ್ಲನಹೊಸೂರು ಹಾಗೂ ಲಕ್ಷ್ಮೀಪುರ ಗ್ರಾಮಗಳಲ್ಲಿ ಕೆಲ ದಿನಗಳಿಂದ ಕುಡಿಯಲು ನೀರಿಲ್ಲದೆ ಪರಿತಪಿಸುವಂತಾಗಿದೆ. ಈ ಬಾರಿ ಸಾಕಷ್ಟು ಮಳೆ ಬಿದ್ದು ಅಂರ್ತಜಲ ವೃದ್ಧಿಸಿದ್ದರೂ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಲು ಅಧಿಕಾರಿಗಳು ನಿರ್ಲಕ್ಷೃ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಪಂ ಸದಸ್ಯ ಶ್ರೀಧರ್ ಮಾತನಾಡಿ, ಲಕ್ಷ್ಮೀಪುರ ಮತ್ತು ಮಾದಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಮೋಟಾರ್ ಕೆಟ್ಟು ಹೋಗಿ 15 ದಿನವಾಗಿದೆ. ಅಧಿಕಾರಿಗಳು ಇತ್ತ ತಿರುಗಿ ನೋಡಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಮೇಲಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸಬೇಕು ಎಂದು ಪಟ್ಟುಹಿಡಿದರು.


ವಿಷಯ ತಿಳಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಪಂಚಾಯತಿ ರಾಜ್ ಅಧಿಕಾರಿ ನರಸಿಂಹರಾಜು ಸ್ಥಳಕ್ಕೆ ಭೇಟಿ ನೀಡಿ, ಕೂಡಲೇ ಕ್ರಮ ವಹಿಸಿ ಜನರ ಸಮಸ್ಯೆ ಬಗೆಹರಿಸಬೇಕೆಂದು ಗ್ರಾಪಂ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗ್ರಾಪಂ ಸದಸ್ಯರಾದ ಅಶೋಕ್, ರಘು, ಸ್ವಾಮಿ, ಕುಮಾರ್, ಲೋಕೆಶ್, ರಾಜೇಶ್, ಬಬ್ರುವಾಹನ, ಉಮೇಶ್, ಪಿಡಿಒ ಸುರೇಶ್‌ಬಾಬು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net