ಗೃಹಲಕ್ಷ್ಮೀ ನೋಂದಣಿಗೆ ಹರಸಾಹಸ

raichur
ರಾಯಚೂರಿನ ಕರ್ನಾಟಕ ಒನ್ ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆಗಾಗಿ ನೋಂದಾಯಿಸಲು ಮಹಿಳೆಯರು ಮುಗಿಬಿದ್ದಿರುವುದು.
Published on

ರಾಯಚೂರು: ನಗರದ ಹಳೇ ತಹಸಿಲ್ ಕಚೇರಿಯ ಕರ್ನಾಟಕ ಒನ್ ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ಶುಕ್ರವಾರ ಮುಗಿಬಿದ್ದರು.

ಬೆಳಗ್ಗೆ 8 ರಿಂದ ಜನರು ಸಾಲು

ಕೇಂದ್ರದ ಮುಂದೆ ಬೆಳಗ್ಗೆ 8 ರಿಂದ ಜನರು ಸಾಲುಗಟ್ಟಿ ನಿಂತಿದ್ದರು. ಸರ್ವರ್ ಸಮಸ್ಯೆಯಿಂದ ನೋಂದಣಿ ಪ್ರಕ್ರಿಯೆ ವಿಳಂಬವಾಯಿತು. ಸಾರ್ವಜನಿಕರು ನಾ ಮುಂದು ತಾ ಮುಂದು ಎಂದು ಕೇಂದ್ರಕ್ಕೆ ಮುಗಿಬಿದ್ದರು. ಇದರಿಂದ ಕೆಲ ಕಾಲ ಗೊಂದಲದ ವಾತಾವರಣ ಉಂಟಾಯಿತು. ಕೆಲವರು ಕೇಂದ್ರದ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.

ಬೆಳಗ್ಗೆಯಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸರ್ವರ್ ಸಮಸ್ಯೆಯಿಂದ ಮಧ್ಯಾಹ್ನವಾದರೂ ಒಂದೂ ಅರ್ಜಿ ಸಲ್ಲಿಕೆ ಆಗಿರಲಿಲ್ಲ. ಇದರಿಂದ ಬೇಸತ್ತ ಜನರು ಸಿಬ್ಬಂದಿ ಜತೆ ವಾಗ್ವಾದ ನಡೆಸಿದರು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಜನರನ್ನು ಚದುರಿಸಿ ಹೊರಗಡೆ ಕಳಿಸಿ ವಾತಾವರಣ ತಿಳಿಗೊಳಿಸಿದರು. ಎಲ್ಲರಿಗೂ ಆನ್‌ಲೈನ್‌ನಲ್ಲಿ ನೋಂದಣಿಗೆ ಅವಕಾಶ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net