ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷೆ; ಶಾಸಕರ ಬೆಂಬಲಿಗರ ಕಿರುಕುಳ ಆರೋಪ

Untitled-1
Published on

ಕೋಲಾರ: ಶಾಸಕರ ಬೆಂಬಲಿಗರ ಕಿರುಕುಳದಿಂದ ಬೇಸತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೋಲಾರ ತಾಲೂಕು ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ‌ ಪುಷ್ಪಾ ಬಾಬು ಆತ್ಮಹತ್ಯೆಗೆ ಯತ್ನಿಸಿದವರು.

ಕೋಲಾರ ಶಾಸಕ ಶ್ರೀನಿವಾಸ ಗೌಡ ಹಾಗೂ ಗ್ರಾಮಪಂಚಾಯಿತಿ ಉಪಾಧ್ಯಕ್ಷ ನಾಗೇಶ್​ ಹಾಗೂ ವಿಜಯಕುಮಾರ್ ಅವರ ಬೆಂಬಲಿಗರು ನೀಡುತ್ತಿದ್ದ ಕಿರುಕುಳ ತಾಳಲಾರದೆ ಇವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಶಾಸಕರು ಮತ್ತು ಗ್ರಾಮಪಂಚಾಯತ್ ಉಪಾಧ್ಯಕ್ಷರ ಬೆಂಬಲಿಗರು ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಕುರಿತು ಪುಷ್ಪಾ ಡೆತ್​ನೋಟ್​ನಲ್ಲಿ ಬರೆದಿಟ್ಟು, ನಿದ್ರೆ ಮಾತ್ರೆ ಸೇವಿಸಿದ್ದಾರೆ. ವಿಷಯ ತಿಳಿದು ಅವರನ್ನು ತಕ್ಷಣ ಆರ್​.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net