ಹೆಡತಲೆ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಮ ನೈರ್ಮಲ್ಯ ಸಭೆ

Oplus_16908288
ನಂಜನಗೂಡು ತಾಲೂಕು ಹೆಡತಲೆ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿಆರೋಗ್ಯ ಮತ್ತು ಗ್ರಾಮ ನೈರ್ಮಲ್ಯ ಸಭೆಯನ್ನು ಡಾ. ಮಂಜುಳಾ ಉದ್ಘಾಟಿಸಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಹದೇವ ನಾಯಕ,ರಾಜು, ಮಹಾದೇವಸ್ವಾಮಿ ಮತ್ತಿತರರು ಹಾಜರಿದ್ದರು.
Published on

ನಂಜನಗೂಡು: ತಾಲೂಕಿನ ಹೆಡತಲೆ ಗ್ರಾಮದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಬುಧವಾರ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಸಭೆಯನ್ನು ಡಾ.ಮಂಜುಳಾ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಗು ಜನಿಸಿದ ತಕ್ಷಣ ಒಂದು ಗಂಟೆಯೊಳಗೆ ತಾಯಿ ಹಾಲು ಕುಡಿಸಬೇಕು. ಮೊದಲು ಕುಡಿಸುವ ಹಾಲಿನಲ್ಲಿ ರೋಗನಿರೋಧಕ ಶಕ್ತಿ ಇರುತ್ತದೆ. ಡೆಂೆ, ಚಿಕೂನ್ ಗುನ್ಯಾ ಸೋಂಕು ಸಂಭವಿಸುವ ಬಗ್ಗೆ ಕಾರ್ಯಕ್ರಮದಲ್ಲಿ ವಿವರವಾಗಿ ತಿಳಿಸಿಕೊಟ್ಟರು.

ತಾಪಂ ಮಾಜಿ ಸದಸ್ಯ ಮಹದೇವ ನಾಯಕ, ಗ್ರಾಮ ಪಂಚಾಯಿತಿ ಸದಸ್ಯರಾದ ರಾಜು, ಮಹಾದೇವಸ್ವಾಮಿ, ರತ್ನಮ್ಮ, ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಮಹದೇವ ನಾಯಕ, ಫೋಟೋಗ್ರಾಫರ್ ಮಹೇಶ್, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net