ದೇವಲ್ಕುಂದದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ

subhiksha karyakrama
ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಂಡ್ಸೆ ವಲಯ ಸಹಭಾಗಿತ್ವದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ನಡೆಯಿತು.
Published on

ಕುಂದಾಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು, ಜನಜಾಗೃತಿ ವೇದಿಕೆ ಕುಂದಾಪುರ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಂಡ್ಸೆ ವಲಯ ಸಹಭಾಗಿತ್ವದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ದೇವಲ್ಕುಂದ ಬಟ್ಟೆ ವಿನಾಯಕ ದೇವಸ್ಥಾನದಲ್ಲಿ ನಡೆಯಿತು.

ಭಜನೆ, ದೇವರಿಗೆ ಪೂಜೆ ನಂತರ ಪ್ರಸಾದ ವಿತರಣೆ ಮಾಡಲಾಯಿತು. ದೇವಸ್ಥಾನ ಅರ್ಚಕ ಪ್ರಮೋದ್ ಭಟ್, ಭಜನಾ ಪರಿಷತ್ ಸಂಯೋಜಕ ಚಂದ್ರ ಪೂಜಾರಿ, ಒಕ್ಕೂಟ ಅಧ್ಯಕ್ಷ ಶಶಿಧರ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ವಲಯ ಮೇಲ್ವಿಚಾರಕ ಚಂದ್ರ ಮಧುವನ, ಸೇವಾ ಪ್ರತಿನಿಧಿ ಯಶೋದಾ, ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net