ಬಸ್ ಡಿಕ್ಕಿಯಾಗಿ ಗ್ರಾಮಕರಣಿಕ ಸಾವು

bisnessman
ಜಯರಾಜ್
Published on

ಬೆಳ್ತಂಗಡಿ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಬಳೆಂಜ ನಿವಾಸಿ ನಡ ಗ್ರಾಮದ ಗ್ರಾಮಕರಣಿಕ ಜಯರಾಜ್(50) ಮೃತರು. ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ದುರ್ಗಾ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು ಎಂಬಲ್ಲಿ ಅಪಘಾತ ಸಂಭವಿಸಿದೆ.

ಅತಿ ವೇಗದಲ್ಲಿ ಬಂದ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಅಪಘಾತದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಜಯರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು. ಬೆಳ್ತಂಗಡಿ ಸಂಚಾರಿ ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net