ಅಗರದಹಳ್ಳಿ ಗ್ರಾಪಂಗೆ ಬೀಗ ಜಡಿದ ಗ್ರಾಮಸ್ಥರು

14 HHR P 05
ಆಗರದಹಳ್ಳಿ ಗ್ರಾಪಂ ಕಟ್ಟಡಕ್ಕೆ ಗ್ರಾಮಸ್ಥರು ಬೀಗ ಜಡಿದು ಪ್ರತಿಭಟನೆ ನಡೆಸಿ ಭದ್ರಾವತಿ ತಾಪಂ ಅಧಿಕಾರಿಗೆ ಮನವಿ ಸಲ್ಲಿಸಿದರು. ರವಿ, ಹನುಮಂತ್, ರಮೇಶ್, ರಂಗನಾಥ್, ಮಹೇಶ್ ಇತರರಿದ್ದರು.
Published on

ಹೊಳೆಹೊನ್ನೂರು: ಆಗರದಹಳ್ಳಿ ಗ್ರಾಪಂ ಅಧಿಕಾರಿಗಳು ಸಮರ್ಪಕ ಸೇವೆ ನೀಡುತ್ತಿಲ್ಲ ಎಂದು ಆರೋಪಿಸಿ ಕೆಲ ಗ್ರಾಮಸ್ಥರು ಬುಧವಾರ ಗ್ರಾಪಂ ಕಟ್ಟಡಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಬಳಿಕ ಗ್ರಾಮಸ್ಥರು ತಂಡೋಪತಂಡವಾಗಿ ಬಂದು ಪ್ರತಿಭಟನೆಯಲ್ಲಿ ಭಾಗವಹಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಚುನಾಯಿತ ಪ್ರತಿನಿಧಿಗಳು ಕೂಡ ಹಣವಂತರು, ರಾಜಕೀಯ ಪ್ರೇರಿತ, ಹಿತಾಸಕ್ತಿಗಳನ್ನು ಮೆಚ್ಚಿಸಲು ಮಾತ್ರ ಕೆಲಸ ಮಾಡುತ್ತಿದ್ದಾರೆ. ಗ್ರಾಪಂ ವ್ಯಾಪ್ತಿಯ ಹಳ್ಳಿಗಳ ಸಾಮಾನ್ಯ ಜನತೆ ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿದ್ದಾರೆ. ಗ್ರಾಪಂನಿಂದ ಜನತೆಗೆ ಸಮರ್ಪಕ ಸೇವೆ ಲಭಿಸುತ್ತಿಲ್ಲ ಎಂದು ದೂರಿದರು. ತಹಸೀಲ್ದಾರ್ ಸ್ಥಳಕ್ಕೆ ಬರುವವರೆಗೆ ಬಾಗಿಲು ತೆರೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದ ಗ್ರಾಮಸ್ಥರ ಮನವೊಲಿಸಿದ ಸಿಪಿಐ ಲಕ್ಷ್ಮೀಪತಿ ಹಾಗೂ ತಾಪಮ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಮಾತನಾಡಿ, ನಿಮ್ಮ ಸಮಸ್ಯೆಗಳನ್ನು ಕೂಡಲೆ ಪರಿಹರಿಸುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಮಹೇಶ್, ರವಿ, ಹನುಮಂತ್, ರಮೇಶ್, ರಂಗನಾಥ್, ಹರೀಶ್, ಸ್ವಾಮಿ, ರಾಮಣ್ಣ, ನವೀನ್ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net