ಚುನಾವಣೆ ಬಹಿಷ್ಕಾರ ನಿರ್ಧಾರ ಕೈಬಿಟ್ಟ ಚಿಕ್ಕಾವಲಿ ಗ್ರಾಮಸ್ಥರು

4sor1
ಸೊರಬ ತಾಲೂಕಿನ ಚಿಕ್ಕಾವಲಿ ಗ್ರಾಮಕ್ಕೆ ತಹಸೀಲ್ದಾರ್ ಹುಸೇನ್ ಸರಕಾವಸ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಗ್ರಾಮಸ್ಥರನ್ನು ಮನವೊಲಿಸಿತು. ಸಿಪಿಐ ರಮೇಶ್ ರಾವ್, ಉದ್ರಿ ಗ್ರಾಪಂ ಅಧ್ಯಕ್ಷೆ ಲಕ್ಷಮ್ಮ, ಉಮೇಶಗೌಡ, ಜಗದೀಶ್ ಇದ್ದರು.
Published on

ಸೊರಬ: ಮತಗಟ್ಟೆಯನ್ನು ಗ್ರಾಮದಲ್ಲಿ ಸ್ಥಾಪಿಸಿ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಪಟ್ಟು ಹಿಡಿದಿದ್ದ ಉದ್ರಿ ಗ್ರಾಪಂ ವ್ಯಾಪ್ತಿ ಚಿಕ್ಕಾವಲಿ ಗ್ರಾಮಸ್ಥರನ್ನು ತಹಸೀಲ್ದಾರ್ ಹುಸೇನ್ ಸರಕಾವಸ್ ನೇತೃತ್ವದ ಅಧಿಕಾರಿಗಳ ತಂಡ ಶನಿವಾರ ಭೇಟಿ ಮಾಡಿ ಮನವೊಲಿಸುವಲ್ಲಿ ಯಶಸ್ವಿಯಾಯಿತು.

ಪ್ರಸ್ತುತ ಮತಗಟ್ಟೆ ದೂರ ಆಗುವುದರಿಂದ ಚಿಕ್ಕಾವಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಮರು ಸ್ಥಾಪಿಸಿ ವ್ಯವಸ್ಥೆ ಮಾಡಿಕೊಡಬೇಕು. ಇಲ್ಲದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದರು. ಇಒ ನೇತೃತ್ವದ ತಂಡ ಶುಕ್ರವಾರ ಭೇಟಿ ನೀಡಿ ಚರ್ಚಿಸಿದರೂ ಗ್ರಾಮಸ್ಥರು ಪಟ್ಟು ಬಿಟ್ಟಿರಲಿಲ್ಲ. ಹೀಗಾಗಿ ಶನಿವಾರ ತಹಸೀಲ್ದಾರ್ ನೇತೃತ್ವದ ತಂಡ ಭೇಟಿ ನೀಡಿ ಸಮಾಲೋಚನೆ ನಡೆಸಿತು.
ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗ್ರಾಮಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತಗಟ್ಟೆ ಸ್ಥಾಪಿಸಲು ಸರ್ಕಾರದ ಗಮನಕ್ಕೆ ತರಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡುವಂತೆ ಗ್ರಾಮಸ್ಥರನ್ನು ಅಧಿಕಾರಿಗಳು ಮನವೊಲಿಸಿದರು.
ಸಿಪಿಐ ರಮೇಶ್ ರಾವ್, ಉದ್ರಿ ಗ್ರಾಪಂ ಅಧ್ಯಕ್ಷೆ ಲಕ್ಷಮ್ಮ, ಉಮೇಶಗೌಡ, ಜಗದೀಶ್, ಚನ್ನಬಸಪ್ಪ, ಪ್ರಕಾಶ್, ಮಹೇಶ್, ರಾಜಪ್ಪ ಗೌಡ, ಬೂದೇಶಗೌಡ, ಶೈಲಜಾ, ಚಂದ್ರಪ್ಪ, ಬಂಗಾರಪ್ಪ, ವೀರಭದ್ರಪ್ಪ, ಶಿವಾನಂದ, ಪ್ರಶಾಂತ್, ಹಾಲಪ್ಪ, ಅಶೋಕ ಮತ್ತು ಗ್ರಾಮಸ್ಥರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net