

ಶಿವಮೊಗ್ಗ: ಹರಿಹರಪುರ ಗೌರಿಗದ್ದೆಯ ಶ್ರೀ ವಿನಯ್ ಗುರೂಜಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವ್ಯಕ್ತಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಭಕ್ತರು ತೀರ್ಥಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗುರೂಜಿ ಭಕ್ತರಾದ ರಾಘವೇಂದ್ರ, ಯೋಗೇಂದ್ರ ಶೆಟ್ಟಿ, ರಾಘವೇಂದ್ರ ಬೊಬ್ಬಿ ಮತ್ತು ಅಭಿಲಾಶ್ ಎಂಬುವರು ಪೊಲೀಸರಿಗೆ ದೂರು ನೀಡಿದವರು. ವಿನಯ್ ಗುರೂಜಿ ಅಂಧ ಭಕ್ತನ ತಲೆ ಮೇಲೆ ಕಾಲಿಟ್ಟಂತೆ ಭಾವಚಿತ್ರವನ್ನು ಎಟಿಡ್ ಮಾಡಿ ಸುರೇಶ್ ಅವರು ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ದೂರಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ವೈರಲ್ ಆಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿದೆ. ಹಾಗಾಗಿ ಪೋಸ್ಟ್ ಮಾಡಿದ ಸುರೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತೀರ್ಥಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.