

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಮಾವನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ನಾಲ್ಕು ಗಂಟೆ ಕಾಲಾವಕಾಶ ನೀಡಿದೆ.
ವಿನಯ್ ಕುಲಕರ್ಣಿ ಅವರ ಪತ್ನಿಯ ತಂದೆ ಗಂಗಪ್ಪ ಶಿಂತ್ರೆ ಮೃತರು. ಇವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಜೈಲಿನಿಂದ ಮಾಜಿ ಸಚಿವರನ್ನು ಪೊಲೀಸರು ಕರೆದೊಯ್ಯಲಿದ್ದಾರೆ. ಇದನ್ನೂ ಓದಿರಿ ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕುಮಾರಸ್ವಾಮಿ!
2016ರ ಜೂನ್ 15ರಂದು ಕೊಲೆಯಾದ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೇಸ್ನಲ್ಲಿ ವಿನಯ್ ಕುಲಕರ್ಣಿಯನ್ನು ಕಳೆದ ನವೆಂಬರ್ನಲ್ಲೇ ಸಿಬಿಐ ಬಂಧಿಸಿತ್ತು. ಈ ಕೊಲೆ ಕೇಸ್ನಲ್ಲಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪವನ್ನು ವಿನಯ್ ಕುಲಕರ್ಣಿ ಎದುರಿಸುತ್ತಿದ್ದಾರೆ.