ಯೋಗಾಸನದಲ್ಲಿ ವಿನಾಯಕ ಕೊಂಗಿ ಸಾಧನೆ

New Vinayak KOngi New
Published on

ಹುಬ್ಬಳ್ಳಿ: ಯೋಗಾಸನ ಭಾರತ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಆಂಧ್ರಪ್ರದೇಶದ ವಿಜಯವಾಡದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿನಾಯಕ ಕೊಂಗಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸತತ 4ನೇ ಬಾರಿಗೆ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿನಾಯಕ ಈ ಬಾರಿ ಎರಡು ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಳ್ಳುವುದರ ಮೂಲಕ ಗಮನ ಸೆಳೆದಿದ್ದಾರೆ. ಸಾಂಪ್ರದಾಯಿಕ ಯೋಗಾಸನ ಮತ್ತು ಹ್ಯಾಂಡ್ ಬ್ಯಾಲೆನ್ಸ್ ವಿಭಾಗಗಳಲ್ಲಿ ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ.

ಈ ಸಾಧನೆ ಬಗ್ಗೆ ಪ್ರತಿಕ್ರಿಯಿಸಿರುವ ಯೋಗಾಸನ ಭಾರತದ ರಾಷ್ಟ್ರೀಯ ನಿರ್ದೇಶಕ, ಯೋಗಗುರು ಭವರಲಾಲ್ ಆರ್ಯ, ಯೋಗಾಭ್ಯಾಸದಲ್ಲಿ ತೋರಿದ ಶ್ರದ್ಧೆ, ಕಠಿಣ ಪರಿಶ್ರಮ ಮತ್ತು ನಿರಂತರ ಸಾಧನೆಯ ಮನೋಭಾವವೇ ವಿನಾಯಕ ಅವರ ಯಶಸ್ಸಿನ ಬುನಾದಿಯಾಗಿವೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net