

ಹೆಬ್ರಿ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ ಮತ್ತು ಕೇಂದ್ರ ರಕ್ಷಣಾ ಸಚಿವಾಲಯ ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ ಶೌರ್ಯ ಪ್ರಶಸ್ತಿಗಳ ಉಪಕ್ರಮದ ಭಾಗವಾಗಿ ವೀರ್ ಗಾಥಾ 4.0 ಸ್ಪರ್ಧೆಯ ಚಿತ್ರಕಲೆಯಲ್ಲಿ ಹೆಬ್ರಿ ಎಸ್.ಆರ್.ಪಬ್ಲಿಕ್ ಸ್ಕೂಲ್ 7ನೇ ತರಗತಿ ವಿದ್ಯಾರ್ಥಿ ವಿನೀಶ್ ಆಚಾರ್ಯ ವಿಜೇತರಾಗಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಭಾಗಿಯಾಗುವ ಅವಕಾಶ ಪಡೆದಿದ್ದಾರೆ. ಶೌರ್ಯ ಪ್ರಶಸ್ತಿ ಪಡೆದವರ ಶೌರ್ಯ ಮತ್ತು ಶೌರ್ಯದ ಕಥೆ ಹಂಚಿಕೊಳ್ಳುವ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಈ ಸ್ಪರ್ಧೆ ಪರಿಚಯಿಸಲಾಗಿದ್ದು, ದೇಶದಲ್ಲಿ ಆಯ್ಕೆ ಆಗಿರುವ 100 ವಿದ್ಯಾರ್ಥಿಗಳಲ್ಲಿ ವಿನೀಶ್ ಆಚಾರ್ಯ ಒಬ್ಬರು. ವಿದ್ಯಾರ್ಥಿಯನ್ನು ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ, ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ ಅಭಿನಂದಿಸಿದ್ದಾರೆ.